ಮೈಸೂರು

ಮೈಸೂರು ಜಿಲ್ಲೆಯಲ್ಲಿ 34ಮಂದಿಯಲ್ಲಿ ಕೊರೋನಾ ಸೋಂಕು

ಮೈಸೂರು,ಡಿ.31:- ಮೈಸೂರು ಜಿಲ್ಲೆಯಲ್ಲಿ ನಿನ್ನೆ 34ಮಂದಿಯಲ್ಲಿ ಕೊರೋನಾ ಸೋಂಕು ತಗುಲಿದ್ದು, 75ಸೋಂಕಿತರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 52,346ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಂತಾಗಿದೆ. ಇವರಲ್ಲಿ 50,887ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಓರ್ವ ಸೋಂಕಿತ ಸಾವನ್ನಪ್ಪಿದ್ದು ಇದುವರೆಗೆ 1013ಮಂದಿ ಸಾವನ್ನಪ್ಪಿದಂತಾಗಿದೆ. 446ಮಂದಿಯಲ್ಲಿ ಸೋಂಕು ಸಕ್ರಿಯವಾಗಿದ್ದು, ಹೋಂ ಐಸೋಲೇಶನ್, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಷೆ ಪಡೆಯುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: