ಮೈಸೂರು

ಕುವೆಂಪುರವರ 117ನೇ ಜಯಂತಿ ಹಾಗೂ ಸಾಧಕರಿಗೆ ಅನಿಕೇತನ ಪ್ರಶಸ್ತಿ ಪ್ರದಾನ

ಮೈಸೂರು,ಡಿ.31:- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ದೆಹಲಿ, ಕರ್ನಾಟಕ ಶರಣ ಮಂಡಳಿ ಮೈಸೂರು ವತಿಯಿಂದ ರಾಷ್ಟ್ರಕವಿ ಕುವೆಂಪುರವರ 117ನೇ ಜಯಂತಿ ಹಾಗೂ ಸಾಧಕರಿಗೆ ಅನಿಕೇತನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಉದ್ಘಾಟಿಸಿದರು. ಡಿ.ದೇವರಾಜ ಅರಸು ಅಧ್ಯಯನ ಪೀಠ ಸಂದರ್ಶಕ ಪ್ರಾಧ್ಯಾಪಕ ಡಾ.ಎಂ.ಜಿ.ಅರಸ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಸಾಹಿತಿ ಪ್ರೊ.ಕೆ.ಎಸ್,ಭಗವಾನ್, ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು, ಹಿರಿಯ ಸಮಾಜ ಸೇವಕ ಡಾ.ಕೆ.ರಘುರಾಂ ವಾಜಪೇಯಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಬಿ.ಸೋಮೇಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮಾಲಂಗಿ ಸುರೇಶ್ ಇವರುಗಳನ್ನು ಸನ್ಮಾನಿಸಲಾಯಿತು.
ಕರಾಹಿಂವಜಾವೇ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ರಾಜ್ಯಾಧ್ಯಕ್ಷ ಡಾ.ಸಿ.ವೆಂಕಟೇಶ್, ಶರಣ ಮಂಡಲಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: