ಕ್ರೀಡೆದೇಶಪ್ರಮುಖ ಸುದ್ದಿ

ತರಬೇತಿ ಆರಂಭಿಸಿದ ಕ್ರಿಕೆಟಿಗ ರೋಹಿತ್ ಶರ್ಮಾ

ವಿದೇಶ( ಮೆಲ್ಬೋರ್ನ್)ಜ.1:- ಭಾರತ ತಂಡದ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ತರಬೇತಿ ಆರಂಭಿಸಿದ್ದಾರೆ. ಈ ಸಂಬಂಧ ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದೆ.

ಡಿಸೆಂಬರ್ ಮಧ್ಯೆದಲ್ಲಿ ಭಾರತದಿಂದ ಸಿಡ್ನಿಗೆ ಆಗಮಿಸಿದ ರೋಹಿತ್, 14 ದಿನಗಳ ಕಡ್ಡಾಯ ಕ್ವಾರಂಟೈನ್ ಅವಧಿಯನ್ನು ಪೂರೈಸಿದ ನಂತರ ಜೈವಿಕ ಸುರಕ್ಷಿತ ತಾಣದಲ್ಲಿರುವ ಭಾರತ ತಂಡವನ್ನು ಸೇರಿಕೊಂಡರು. ಭಾರತ ತಂಡದ ಆರಂಭಿಕ ಆಟಗಾರ ರೋಹಿತ್ ಕ್ಯಾಚ್ ಗಳ ಅಭ್ಯಾಸ ಮಾಡುತ್ತಿರುವ ಚಿತ್ರವನ್ನು ಬಿಸಿಸಿಐ ತನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದೆ.

ರೋಹಿತ್ ಫಿಟ್ನೆಸ್ ಭಾರತ ತಂಡಕ್ಕೆ ಅತ್ಯಂತ ನಿರ್ಣಾಯಕವಾಗಿದೆ. ಏಕೆಂದರೆ ನವೆಂಬರ್ 10ಕ್ಕೆ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆಡಿದ ನಂತರ ರೋಹಿತ್ ಇದುವರೆಗೂ ಆಡಿಲ್ಲ.

ಐಪಿಎಲ್ ವೇಳೆ ಗಾಯಗೊಂಡ ಕಾರಣ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ರೋಹಿತ್ ಪುನಶ್ಚೇತನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ ರೋಹಿತ್ ಅವರ ಈ ನಿರ್ಧಾರಕ್ಕೆ ಖಾಯಂ ನಾಯಕ ವಿರಾಟ್ ಕೊಹ್ಲಿ ಬೇಸರ ವ್ಯಕ್ತಪಡಿಸಿದ್ದರು. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: