ಮೈಸೂರು

ನಮ್ಮ ಆಸ್ತಿ ಯನ್ನು ನಾವು ಸುರಕ್ಷತೆ ಮಾಡುತ್ತಿದ್ದೇವೆ : ರಾಜಮಾತೆ ಪ್ರಮೋದಾದೇವಿ ಒಡೆಯರ್

ಮೈಸೂರು,ಜ.2:- ಮೈಸೂರಿನ ಲಲಿತ ಮಹಲ್ ಹೆಲಿಪ್ಯಾಡ್ ಜಾಗಕ್ಕೆ ಬೇಲಿ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮೈಸೂರು ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರು, ನಾವು ಯಾರಿಗೂ ತೊಂದರೆ ಕೊಡುವುದಿಲ್ಲ. ನಮ್ಮ ಆಸ್ತಿಯನ್ನು ನಾವು ಸುರಕ್ಷತೆ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.

ಕಳೆದ ಜೂನ್ ತಿಂಗಳಲ್ಲಿ ಹೈಕೋರ್ಟ್ ನೀಡಿದ ತೀರ್ಪಿನ ಪ್ರಕಾರ ಹೆಲಿಪ್ಯಾಡ್ ಇರುವ ಜಾಗ ನಮ್ಮದು. ಆ ಜಾಗದಲ್ಲಿ ಯಾರೋ ಹೊರಗಿನವರು ಬೇಲಿ ಹಾಕುವುದನ್ನು ಗಮನಿಸಿದ್ದೇವೆ. ನಮ್ಮ ಜಾಗವನ್ನು ನಾವು ಭದ್ರ ಮಾಡಿಕೊಳ್ಳಬೇಕು ಎನ್ನುವ ಕಾರಣಕ್ಕಾಗಿ ಬೋರ್ಡ್ ಹಾಕಿಸಿದ್ದೇವೆ. ಯಾರಿಗೋ ತೊಂದರೆ ಕೊಡಬೇಕು ಅನ್ನುವುದು ನಮ್ಮ ಉದ್ದೇಶ ಅಲ್ಲ. ಮುಂದೆಯೂ ಅಗತ್ಯ ಬಿದ್ದರೆ ಹೆಲಿಪ್ಯಾಡ್ ಬಳಸಿಕೊಳ್ಳಲಿ ಎಂದರು.

ಮೈಸೂರು, ಬೆಂಗಳೂರು ಅರಮನೆಗಳ ವ್ಯಾಜ್ಯ ವಿಚಾರಕ್ಕೆ ‌ಕೂಡ ಪ್ರಮೋದಾದೇವಿ ಅವರು ಸ್ಪಷ್ಡನೆ ನೀಡಿದರು.
ಈ ವಿಚಾರದಲ್ಲಿ ಎಲ್ಲ ಸರ್ಕಾರಗಳೂ ನಮಗೆ ತೊಂದರೆ ಕೊಟ್ಟಿವೆ.
ಆದರೆ ಈಗಿನ ಸರ್ಕಾರ ತಟಸ್ಥವಾಗಿದೆ. ನಮ್ಮ ಆಸ್ತಿಗಳ ವಿಚಾರದಲ್ಲಿ ಎಲ್ಲ ಸರ್ಕಾರಗಳೂ ತೊಂದರೆ ಕೊಟ್ಟಿವೆ.
ಕೆಲವು ಸರ್ಕಾರಗಳು ಜಾಸ್ತಿ ತೊಂದರೆ ಕೊಟ್ಟಿವೆ, ಕೆಲವು ಸರ್ಕಾರಗಳು ಕಡಿಮೆ ತೊಂದರೆ ಕೊಟ್ಟಿವೆ. ಯಾವುದೇ ಸರ್ಕಾರ ಅಥವಾ ವ್ಯಕ್ತಿಯನ್ನು ನಾನು ದೂಷಿಸುವುದಿಲ್ಲ ಎಂದರು.

ಬೆಂಗಳೂರು ಮತ್ತು ಮೈಸೂರು ಅರಮನೆ ಮಾಲೀಕತ್ವದ ವಿಚಾರ ಇನ್ನೂ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇದೆ‌. ಮುಂಬೈ ಪ್ರಾಪರ್ಟಿ ಓನರ್ ಅಸೋಸಿಯೇಶನ್ ಸುಪ್ರೀಂಕೋರ್ಟ್‌ನಲ್ಲಿ ವ್ಯಾಜ್ಯ ಹೂಡಿದೆ. ಈ ಪ್ರಕರಣದಲ್ಲಿ 9 ನ್ಯಾಯಾಧೀಶರ ಸಂವಿಧಾನ ಪೀಠ ತೀರ್ಪು ನೀಡಬೇಕಿದೆ. ಆ ತೀರ್ಪುನ್ನು ಆಧರಿಸಿ ನಮ್ಮ ವ್ಯಾಜ್ಯಗಳು ಇತ್ಯರ್ಥ ಆಗಬೇಕಿದೆ. ನಾವು ಡೆಲ್ಲಿಯಲ್ಲಿ ಇದ್ದರೆ ವ್ಯಾಜ್ಯಗಳು ಬೇಗ ಬರೆಹರಿಯುತ್ತಿದ್ದವು. ಮೈಸೂರಿನಲ್ಲೇ ಇರುವುದರಿಂದ ವಿಳಂಬ ಆಗುತ್ತಿರಬಹುದು ಎಂದರು.
ರಾಜಕೀಯ ನನಗೆ ಸೂಟ್ ಆಗತ್ತೆ.ಆದರೆ ರಾಜಕೀಯಕ್ಕೆ ನಾನು ಸೂಟ್ ಆಗಲ್ಲ ಎಂದರು.
ಈ ಸಂಬಂಧ ಹಿಂದೆಯೂ ಹಲವಾರು ಬಾರಿ ಸ್ಪಷ್ಟನೆ ಕೊಟ್ಟಿದ್ದೆ.ಪದೇ ಪದೇ ಅದನ್ನೇ ಹೇಳೋದಿಕ್ಕೆ ಇಷ್ಟ ಇಲ್ಲ. ಆಡಳಿತ ನಡೆಸುವುದಕ್ಕೆ ನನಗೆ ಕಷ್ಟ ಆಗಲ್ಲ.ಆದರೆ ರಾಜಕೀಯಕ್ಕೆ ನಾನು ಸೂಟ್ ಆಗಲ್ಲ.ಹೀಗಾಗಿ ನಾನು ರಾಜಕೀಯಕ್ಕೆ ಹೋಗಲ್ಲ ಎಂದರು. (ಕೆ.ಎಸ್,ಎಸ್ಎಚ್)

Leave a Reply

comments

Related Articles

error: