ದೇಶಪ್ರಮುಖ ಸುದ್ದಿ

ಸ್ಮಶಾನದ ಛಾವಣಿ ಕುಸಿದ ಪ್ರಕರಣ : ಮೂವರ ಬಂಧನ

ದೇಶ(ಯುಪಿ)ಜ.4:- ಉತ್ತರ ಪ್ರದೇಶದ ಗಾಜಿಯಾಬಾದ್ ನ ಮುರದ್ ನಗರದಲ್ಲಿ ಸ್ಮಶಾನದ ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ.
ಕೆಲಸದಲ್ಲಿ ನಿರ್ಲಕ್ಷ್ಯ, ಕರ್ತವ್ಯ ಲೋಪ ಆರೋಪದ ಮೇಲೆ ಕಿರಿಯ ಎಂಜಿನಿಯರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಛಾವಣಿ ಕುಸಿದು ಮೃತಪಟ್ಟವರ ಕುಟುಂಬಸ್ಥರು ಕಟ್ಟಡದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಿರುವುದರಿಂದ ಹೀಗಾಗಿದೆ ಎಂದು ಆರೋಪಿಸಿದ್ದಾರೆ.

ಘಟನೆ ನಡೆದ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಡಿಯೋ ಹೇಳಿಕೆಯನ್ನು ಹೊರಡಿಸಿದ್ದು, ಜಿಲ್ಲಾಡಳಿತ ಮತ್ತು ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ ಅವರಿಗೆ ಸೂಚನೆ ನೀಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವಂತೆ, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದು ಘಟನೆ ಬಗ್ಗೆ ವರದಿ ಕೇಳಿದ್ದೇನೆ, ಘಟನೆಗೆ ನಿಖರ ಕಾರಣ ತಿಳಿದುಕೊಳ್ಳಲು ಮತ್ತು ನಿಖರತೆ ಪಡೆಯಲು ರಾಜ್ಯಾಡಳಿತಕ್ಕೆ ಸೂಕ್ತ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ ಎಂದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: