ಮೈಸೂರು

ಕರ್ತವ್ಯ ಲೋಪ : ಬಿಳಿಗೆರೆ ಪೊಲೀಸ್ ಠಾಣೆ ಪಿಎಸ್ ಐ ಅಮಾನತು

ಮೈಸೂರು,ಜ.4:- ನಂಜನಗೂಡು ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ನಂಜನಗೂಡು ತಾಲೂಕಿನ ಬಿಳಿಗೆರೆ ಪೊಲೀಸ್ ಠಾಣೆ ಪಿಎಸ್ ಐ ಆಕಾಶ್ ಎಂಬವರನ್ನು ಅಮಾನತುಗೊಳಿಸಲಾಗಿದೆ.
ಸಮರ್ಥವಾಗಿ ಕಾರ್ಯನಿರ್ವಹಿಸದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕಾನೂನುಬಾಹಿರವಾಗಿ ನಡೆಯುತ್ತಿದ್ದ ಮರಳುಗಣಿಗಾರಿಕೆ ತಡೆಯುವಲ್ಲಿ ವಿಫಲರಾಗಿರುವುದು ಕಂಡು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ,ಬಿ.ರಿಷ್ಯಂತ್ ತಿಳಿಸಿದ್ದಾರೆ. (ಕೆ.ಎಸ್,ಎಸ್ಎಚ್)

Leave a Reply

comments

Related Articles

error: