ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ 815 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

ರಾಜ್ಯ( ಬೆಂಗಳೂರು)ಜ.6:- ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಜ.5 ರಂದು 815
ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಕುರಿತು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 901579 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 8 ಮಂದಿ ಮೃತಪಟ್ಟಿದ್ದು, ಇದುವೆರೆಗೆ ಸಾವಿನ ಸಂಖ್ಯೆ 12118 ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಿಸಿರುವ ಅಂಕಿ-ಅಂಶಗಳ ಪೈಕಿ 1377 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 901579 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು 9637 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 194 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: