ಮೈಸೂರು

ಉದ್ಯೋಗಿನಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ

ಮೈಸೂರು,ಜ.6:- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಎಸ್. ರೇಣುಕಾ ರಾಜು ಅವರ ಅಧ್ಯಕ್ಷತೆಯಲ್ಲಿ ವಿಜಯನಗರದಲ್ಲಿರುವ ಕೃಷ್ಣದೇವರಾಯ ವೃತ್ತ ಸ್ತ್ರೀಶಕ್ತಿ ಭವನ ಆವರಣದಲ್ಲಿ ನಿಗಮದ ಯೋಜನೆಗಳಾದ ಚೇತನಾ ಹಾಗೂ ಉದ್ಯೋಗಿನಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಿ, ಪ್ರಮಾಣ ಪತ್ರ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ. ಪದ್ಮ , ಜಿಲ್ಲಾ ನಿರೂಪಣಾಧಿಕಾರಿಗಳಾದ ಗೀತಾಲಕ್ಷ್ಮೀ , ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಕೆ.ಎನ್ ಆನಂದ ನಾಯಕ , ಸಂಯೋಜಕರಾದ ರವೀಂದ್ರ ಹಾಗೂ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರಾದ ಹೆಚ್.ವಿ ಜಗದಾಂಭ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: