ಕರ್ನಾಟಕಪ್ರಮುಖ ಸುದ್ದಿಮೈಸೂರು

ವಿಧಾನ ಪರಿಷತ್ ಅರ್ಜಿಗಳ ಸಮಿತಿ ಆಧ್ಯಕ್ಷರಾಗಿ ಹೆಚ್. ವಿಶ್ವನಾಥ್ ನೇಮಕ

ಮೈಸೂರು/ಬೆಂಗಳೂರು, ಜ.6:- ವಿಧಾನ ಪರಿಷತ್ ಅರ್ಜಿಗಳ ಸಮಿತಿ ಆಧ್ಯಕ್ಷರಾಗಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೆಚ್. ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ. ವಸತಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಸ್ ವಿ ಸಂಕನೂರು ನೇಮಿಸಲಾಗಿದ್ದು ಕಾರ್ಯದರ್ಶಿ ಮಹಾಲಕ್ಷ್ಮಿ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ತಾತ್ಕಾಲಿಕ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: