ದೇಶಪ್ರಮುಖ ಸುದ್ದಿ

ದೇಶದಲ್ಲಿ ಮತ್ತೆ 13 ಜನರಲ್ಲಿ ರೂಪಾಂತರಿ ಕೊರೊನಾ ಪತ್ತೆ: ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆ

ನವದೆಹಲಿ,ಜ.6-ದೇಶದಲ್ಲಿ ರೂಪಾಂತರ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇಂದು ಮತ್ತೆ 13 ಮಂದಿಯಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 13 ಜನರಲ್ಲಿ ಹೊಸ ಬ್ರಿಟನ್‌ ರೂಪಾಂತರದ ಕೊರೊನಾ ಸೋಂಕು ಪತ್ತೆಯಾಗುವುದರೊಂದಿಗೆ ಹೊಸ ತಳಿಯ ಸೋಂಕಿಗೆ ಗುರಿಯಾದವರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ವಿವಿಧ ರಾಜ್ಯಗಳಿಂದ ರವಾನಿಸಲಾಗಿದ್ದ ಸೋಂಕಿತರ ವರದಿಯನ್ನು ಪುಣೆಯ ರಾಷ್ಟ್ರೀಯ ವೈರಾಣು ಕೇಂದ್ರದಲ್ಲಿ ಪರೀಕ್ಷೆಗೊಳಪಡಿಸಲಾಗಿದೆ. ಈಗಾಗಲೇ ಎಲ್ಲಾ ಸೋಂಕಿತರನ್ನು ಪ್ರತ್ಯೇಕ ಕೊಠಡಿಗಳಲ್ಲಿ ಐಸೋಲೇಷನ್ ನಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದವರೆಲ್ಲರನ್ನೂ ಕ್ವಾರಂಟೈನ್ ಗೊಳಪಡಿಸಲಾಗಿದ್ದು, ಸಹ ಪ್ರಯಾಣಿಕರು, ಕುಟುಂಸ್ಥರು ಹಾಗೂ ಇತರಿಗಾಗಿ ಹುಡುಕಾಟ ಆರಂಭಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: