ಕರ್ನಾಟಕಪ್ರಮುಖ ಸುದ್ದಿಮೈಸೂರು

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಮಳೆ : ಮೈಸೂರಿನಲ್ಲಿಯೂ ಸಂಜೆಯಿಂದ ಆರಂಭ

ರಾಜ್ಯ( ಬೆಂಗಳೂರು)ಜ.6:- ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆ ಇನ್ನೂ ಕಡಿಮೆಯಾಗಿಲ್ಲ. ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ. ಜ. 8ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಕೂಡ ಇಂದು ಹಗುರ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ಅಲೆಗಳ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.

ಮುಂದಿನ ನಾಲ್ಕು‌ ದಿನಗಳ ಕಾಲ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ‌ ಜನವರಿ 10ರವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದುಎಂದು ಬೆಂಗಳೂರು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಹನುಮಂತನಗರ, ಬಸವನಗುಡಿ, ಜಯನಗರ, ಕಾರ್ಪೋರೇಷನ್ ವೃತ್ತ, ಕೆ.ಆರ್. ಮಾರ್ಕೆಟ್, ಡಾಲರ್ಸ್ ಕಾಲೋನಿ, ಮಲ್ಲೇಶ್ವರಂ, ಬನಶಂಕರಿ, ಹೆಬ್ಬಾಳ, ಆರ್.ಟಿ. ನಗರ, ರೇಸ್ ಕೋರ್ಸ್ ರಸ್ತೆ ಸೇರಿ ಹಲವೆಡೆ ಮಳೆ ಸುರಿಯುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ಇಂದು ಮತ್ತೆ ಮಳೆ ಆರಂಭವಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಹಲವೆಡೆ 4 ದಿನ ಮಳೆ ಸುರಿಯುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. 3 ದಿನಗಳ ಹಿಂದೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಮಳೆಯಾಗಿತ್ತು. ಮುಂದಿನ ಮೂರು ದಿನ ಮಳೆಯ ವಾತಾವರಣ ಮುಂದುವರೆಯಲಿದ್ದು, ಮಲೆನಾಡು, ಕೊಡಗು, ಹಾಸನದಲ್ಲಿ ಹಳದಿ ಅಲರ್ಟ್​ ಘೋಷಣೆ ಮಾಡಲಾಗಿದೆ.
ಮೈಸೂರಿನಲ್ಲಿಯೂ ಸಂಜೆ 7ಗಂಟೆಯಿಂದ ಮಳೆ ಆರಂಭವಾಗಿದೆ. ಆರಂಭದಲ್ಲಿ ಹನಿಹನಿಯಾಗಿ ಸುರಿದ ಮಳೆ ಅರ್ಧ ಗಂಟೆಯ ನಂತರ ಧಾರಾಕಾರವಾಗಿ ಅಬ್ಬರಿಸಿದೆ.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: