ಕರ್ನಾಟಕಪ್ರಮುಖ ಸುದ್ದಿ

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು-ಜೂನ್ ಮೊದಲ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ : ಸಚಿವ ಸುರೇಶ್ ಕುಮಾರ್

ರಾಜ್ಯ( ಬೆಂಗಳೂರು)ಜ.6:- ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್ಎಸ್ಎಲ್ ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರ್ತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಠ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.

ಪಠ್ಯ ಕಡಿತವಿಲ್ಲ
ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನವನ್ನು ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: