ಮೈಸೂರು

ಏ.17 : ಗುಂಡ್ಲುಪೇಟೆ- ನಂಜನಗೂಡಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ

ಗುಂಡ್ಲುಪೇಟೆ ಮತ್ತು ನಂಜನಗೂಡಿನಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು,  ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.
ಇತ್ತೀಚೆಗೆ ನಡೆದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಶ್ರಮಿಸಿದ ಎಲ್ಲಾ ಕಾರ್ಯಕರ್ತರನ್ನು ಖುದ್ದಾಗಿ ಅಭಿನಂದಿಸುವ ಸಲುವಾಗಿ ಏ.17ರಂದು ಗುಂಡ್ಲುಪೇಟೆ ಮತ್ತು ನಂಜನಗೂಡಿಗೆ  ಯಡಿಯೂರಪ್ಪ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12ಕ್ಕೆ  ಗುಂಡ್ಲುಪೇಟೆಯಲ್ಲಿ ಹಾಗೂ ಸಂಜೆ 4ಕ್ಕೆ ನಂಜನಗೂಡಿನಲ್ಲಿ ನಡೆಯುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯು ಈಗಾಗಲೇ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದು, ಆಡಳಿತ ಕಾಂಗ್ರೆಸ್ ಪಕ್ಷಕ್ಕೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ನೀಡಿರುವ ಪ್ರಬಲ ಪೈಪೋಟಿ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಮುಂದಿನ ಚುನಾವಣೆಗಾಗಿ ತಮ್ಮ ಶ್ರಮವನ್ನು ಮುಂದುವರಿಸಲು ರಾಜ್ಯ ಅಧ್ಯಕ್ಷರ ಈ ಭೇಟಿಯು ಪ್ರೇರಣೆಯಾಗಲಿದೆ.
ಎರಡೂ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಯಾವುದೇ ಪ್ರಾಬಲ್ಯ ಇಲ್ಲದಿದ್ದರೂ ಮತದಾರರು ಕಾಂಗ್ರೆಸ್ ಗೆ ಬಿಜೆಪಿಯೇ ಪರ್ಯಾಯ ಎಂದು ಎರಡೂ ಕ್ಷೇತ್ರಗಳಲ್ಲಿ ಮತದಾನದ ಮೂಲಕ ಸಾರಿದ್ದಾರೆ. ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷರು ಪ್ರಚಾರದ ವೇಳೆ ಅತ್ಯಂತ ಕ್ರಿಯಾಶೀಲರಾಗಿ ಬಿರುಸಿನ ಪ್ರವಾಸ ಮಾಡಿರುವುದು ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಬಲವನ್ನು ಗಮನಾರ್ಹವಾಗಿ ಹೆಚ್ಚಿಸಿದೆ  ಎಂದು ಬಿಜೆಪಿ ಉನ್ನತ ಮೂಲಗಳು ಸಿಟಿಟುಡೆಗೆ ತಿಳಿಸಿವೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: