ಮೈಸೂರು

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : ಇಬ್ಬರು ಯುವತಿಯರ ರಕ್ಷಣೆ

ಮೈಸೂರು,ಜ.7:- ತೋಟದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆ ದಾಳಿ ನಡೆಸಿದ ಮೇಟಗಳ್ಳಿ ಠಾಣಾ ಪೊಲೀಸರು ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ಮೇಟಗಳ್ಳಿ ಠಾಣಾ ವ್ಯಾಪ್ತಿಯ ಶಾದನಹಳ್ಳಿಯ ತೋಟದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು ಈ ವೇಳೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಚಂದ್ರ ಮತ್ತು ಪ್ರಕಾಶ್ ಎಂಬವರು ಪೊಲೀಸರನ್ನು ಕಂಡೊಡನೆಯೇ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳದಲ್ಲಿದ್ದ ಬೆಂಗಳೂರು, ಮಡಿಕೇರಿಯ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: