Uncategorizedಮೈಸೂರು

ಆಫ್ ಲೈನ್ ಪರೀಕ್ಷೆ ವಿರೋಧಿಸಿ ಪ್ರತಿಭಟನೆ

ಮೈಸೂರು,ಜ.7:- ಕಾಲೇಜಿಗೆ ಬಂದು ಪರೀಕ್ಷೆ ಬರೆಯಲು ಹೇಳಿದ ಕ್ರಮವನ್ನು ಖಂಡಿಸಿ ಮೈಸೂರು ಶ್ರೀ ಜಯಚಾಮರಾಜೇಂದ್ರ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದು ಕಾಲೇಜು ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮಾತನಾಡಿ ಕೋವಿಡ್ ಹಿನ್ನೆಲೆಯಲ್ಲಿ ಇಷ್ಟು ದಿನ ನಮಗೆ ಆನ್ ಲೈನ್ ಪಾಠ ಮಾಡುತ್ತಿದ್ದರು. ಕೆಲವರಿಗೆ ಅರ್ಥವಾದರೆ ಬಹಳ ವಿದ್ಯಾರ್ಥಿಗಳಿಗೆ ಅರ್ಥವೇ ಆಗಿಲ್ಲ. ಈಗ ಕಾಲೇಜಿಗೆ ಬಂದು ಪರೀಕ್ಷೆ ಬರೆಯುವಂತೆ ಹೇಳುತ್ತಾರೆ. ನಮಗೆ ಆನ್ ಲೈನ್ ನಲ್ಲಿಯೇ ಪರೀಕ್ಷೆಯನ್ನು ಮಾಡಿ. ಆಫ್ ಲೈನ್ ಪರೀಕ್ಷೆ ಬೇಡ ಎಂದರಲ್ಲದೇ, ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಘೋಷಣೆ ಕೂಗಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: