ಮೈಸೂರು

ಹಕ್ಕಿಜ್ವರ ಹಿನ್ನೆಲೆ : ಬಾವಲಿ ಚೆಕ್ ಪೋಸ್ಟ್ ನಲ್ಲಿ ವಾಹನಗಳ ಸ್ಯಾನಿಟೈಸೇಷನ್

ಮೈಸೂರು,ಜ.7:- ಮೈಸೂರು ಜಿಲ್ಲೆಯಲ್ಲಿ ಈವರೆಗೆ ಹಕ್ಕಿಜ್ವರ ಕಂಡುಬಂದಿಲ್ಲ . ಹಕ್ಕಿಜ್ವರದ ಪತ್ತೆಗಾಗಿ ಜಿಲ್ಲಾಡಳಿತ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ಹಿಂದೆಯೇ ಸ್ಪಷ್ಟನೆ ನೀಡಿದ್ದರು.
ಹಕ್ಕಿ ಜ್ವರ ಆತಂಕ ಕುರಿತು ಮಾತನಾಡಿದ್ದ ಮೈಸೂರು ಡಿಸಿ ರೋಹಿಣಿ ಸಿಂಧೂರಿ , ಅಕ್ಕಪಕ್ಕದ ರಾಜ್ಯದಲ್ಲಿ ಹಕ್ಕಿಜ್ವರ ಕಂಡುಬಂದಿದ್ದು . ಅಲ್ಲಿ ಕಲ್ಲಿಂಗ್ ಆಪರೇಷನ್ ಕೂಡ ನಡೆಯುತ್ತಿದೆ . ಕಳೆದ ವರ್ಷ ಮೈಸೂರಿನಲ್ಲಿ ಹಕ್ಕಿಜ್ವರದ ಹಿನ್ನೆಲೆಯಲ್ಲಿ ಕಲ್ಲಿಂಗ್ ಆಪರೇಷನ್ ನಡೆದಿತ್ತು . ಅದಕ್ಕಾಗಿ ಈ ಬಾರಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ವಹಿಸಿದ್ದೇವೆ . ಕೇರಳ ಹಾಗೂ ತಮಿಳುನಾಡು ಗಡಿಯಲ್ಲಿ ಪಕ್ಷಿ ಹಾಗೂ ಕೋಳಿ ಸಾಗಾಟ ನಿಷೇಧ ಮಾಡಲಾಗಿದೆ . ಆ ರಾಜ್ಯಗಳಿಂದ ಬರುವ ವಾಹನಗಳನ್ನು ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ . ವಲಸೆ ಹಕ್ಕಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಹಕ್ಕಿಜ್ವರ ಪತ್ತೆಯಾದರೆ ಮುಂದಿನ ಹಂತದ ನಿರ್ಧಾರ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟಪಡಿಸಿದ್ದರು,
ಅದರಂತೆ ಇಂದು ಕೇರಳ ಗಡಿ ಎಚ್.ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಬಿಗಿ ಬಂದೋಬಸ್ತ್ ರೂಪಿಸಲಾಗಿದ್ದು, ಪಶುಸಂಗೋಪನಾ ಇಲಾಖೆ ಮತ್ತು ಪೊಲೀಸ್ ಇಲಾಖೆಯಿಂದ ವಾಹನಗಳ ತಪಾಸಣೆ ನಡೆಯುತ್ತಿದೆ,
ಬಾವಲಿ ಚೆಕ್ ಪೊಸ್ಟ್ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಕೇರಳದ ಗಡಿಭಾಗದಲ್ಲಿ ಬರುವ ವಾಹನಗಳನ್ನು ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ . (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: