ಕರ್ನಾಟಕಪ್ರಮುಖ ಸುದ್ದಿ

ಏ. 17 ರ ಜಯಂತಿ ಆಚರಣೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಏಪ್ರಿಲ್ 17 ರಂದು ಆಚರಿಸಲುದ್ದೇಶಿಸಿದ್ದ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಜನ್ಮದಿನಾಚರಣೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ ಏ. 17 ರಂದು ಕೆಂಪೇಗೌಡ ದಿನಾಚರಣೆ ಆಚರಿಸಲು ಸಿದ್ಧತೆ ನಡೆಸಿತ್ತು. ಆದರೆ ಇದಕ್ಕೆ ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದರು.ಇತಿಹಾಸಗಳಿಂದ ತಿಳಿದುಬಂದ ಮಾಹಿತಿ ಪ್ರಕಾರ ಏ. 27 ರಂದು ಕೆಂಪೇಗೌಡರು ಜನಿಸಿದ್ದರು ಎನ್ನಲಾಗಿದ್ದರೂ ಏಪ್ರಿಲ್ 17 ರಂದು ಜನ್ಮದಿನ ಆಚರಿಸಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.
ಜನ್ಮದಿನವನ್ನು ಇತಿಹಾಸ ದಾಖಲೆಗಳ ಪ್ರಕಾರವೇ ಆಚರಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದರು. ಶ್ರೀಗಳ ಸಲಹೆ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಏ. 17 ರ ಜಯಂತಿ ಆಚರಣೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: