
ಮೈಸೂರು
ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಮೈಸೂರು,ಜ.8:- ಮೈಸೂರಿನ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಹುಣಸೂರು ತಾಲೂಕು ಮುದ್ದನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಳಬೋಚನಹಳ್ಳಿ ಶಿವಣ್ಣ ನಾಯ್ಕ ಅವರ ಮೃತದೇಹ ಪತ್ತೆಯಾಗಿದೆ.
ಡಿ 23 ರಂದು ಕೊಡಗಿನ ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ಶಿವಣ್ಣ ನಾಯ್ಕ ಹೋಗಿದ್ದರು. ಅಂದಿನಿಂದ ನಾಪತ್ತೆಯಾಗಿದ್ದ ಶಿವಣ್ಣ ಪತ್ತೆಯಾಗಿರಲಿಲ್ಲ. ಶಿವಣ್ಣ ಶವವನ್ನು ದನಗಾಹಿಗಳು ನೋಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿ ಹುಣಸೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. (ಕೆ.ಎಸ್,ಎಸ್.ಎಚ್)