ದೇಶಪ್ರಮುಖ ಸುದ್ದಿ

ಕೊಂಕಣಿ ಅಕಾಡೆಮಿ ಸ್ಥಾಪಿಸುವ ಕುರಿತು ನಿರ್ಧರಿಸಿದ ದೆಹಲಿ ಸರ್ಕಾರ

ದೇಶ(ನವದೆಹಲಿ)ಜ.9:-ದೆಹಲಿ ಸರ್ಕಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊಂಕಣಿ ಭಾಷೆ, ಸಂಸ್ಕೃತಿಯ ಅಭಿವೃದ್ಧಿ ಮತ್ತು ಪ್ರೋತ್ಸಾಹಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಿಶೇಷ ನಿರ್ಧಾರ ಕೈಗೊಂಡಿದೆ.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಕೊಂಕಣಿ ಅಕಾಡೆಮಿ ಸ್ಥಾಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಕಲೆ, ಸಂಸ್ಕೃತಿ ಮತ್ತು ಭಾಷೆಗಳ ವಿಭಾಗದ ವ್ಯಾಪ್ತಿಯಲ್ಲಿ ಅಕಾಡೆಮಿ ರಚಿಸುವ ಬಗ್ಗೆ ಸಂಪುಟದಲ್ಲಿ ಸಮ್ಮತಿ ಸೂಚಿಸಲಾಗಿದೆ. ಶೀಘ್ರದಲ್ಲಿಯೇ ಅಕಾಡೆಮಿಗೆ ಬೇಕಾಗಿರುವ ಕಚೇರಿ ಮತ್ತು ಇತರ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ದೆಹಲಿ ಸರ್ಕಾರ ಪ್ರಕಟಿಸಿದೆ.
ಉಪ ಮುಖ್ಯಮಂತ್ರಿ ಮನೀಷ್‌ ಸಿಸ್ಸೋಡಿಯಾ ಪ್ರತಿಕ್ರಿಯಿಸಿ “ಭಾರತದ ಪ್ರತಿಯೊಬ್ಬನ ಹೃದಯಲ್ಲಿ ಗೋವಾದ ಬಗ್ಗೆ ವಿಶೇಷ ಸ್ಥಾನ ಇದೆ’ ಎಂದು ಹೇಳಿದ್ದಾರೆ. ಅಕಾಡೆಮಿ ಸ್ಥಾಪನೆ ಮಾಡುವುದರಿಂದ ನವದೆಹಲಿಯಲ್ಲಿ ಕೊಂಕಣಿ ಭಾಷೆಯ ಸೊಗಡು, ಸಂಸ್ಕೃತಿಗೆ ಹೆಚ್ಚಿನ ಪ್ರಚಾರ ಸಿಗಲಿದೆ ಎಂದು ಹೇಳಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: