ಕರ್ನಾಟಕಪ್ರಮುಖ ಸುದ್ದಿ

ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲ : ಮುಂದಿನ ಸಭೆ 15ಕ್ಕೆ ನಿಗದಿ

ದೇಶ( ನವದೆಹಲಿ)ಜ.9:- ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಜ.08 ರಂದು ನಡೆದ 8 ನೇ ಸುತ್ತಿನ ಮಾತುಕತೆಯೂ ವಿಫಲಾಗಿದೆ.

ರೈತರು ಕಾಯ್ದೆ ವಾಪಸ್ ತೆಗೆದುಕೊಳ್ಳುವವರೆಗೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ, ಪ್ರಾಣ ಹೋದರೂ ಸರಿಯೇ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಬಿಗಿಪಟ್ಟು ಹಿಡಿದು ಕುಳಿತಿದ್ದರೆ, ಕೇಂದ್ರ ಸರ್ಕಾರದ ಪರವಾಗಿ ಸಭೆಯಲ್ಲಿ ಭಾಗಿಯಾಗಿದ್ದ ಕೃಷಿ ಸಚಿವ ನರೇಂದ್ರ ತೋಮರ್ ಯಾವುದೇ ಕಾರಣಕ್ಕೂ ಕಾಯ್ದೆ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ಮುಂದಿನ ಸಭೆ ಜ.15 ಕ್ಕೆ ನಿಗದಿಯಾಗಿದೆ. ಆದರೆ ಪ್ರತಿಭಟನೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜ.11ಕ್ಕೆ ಕೈಗೆತ್ತಿಕೊಳ್ಳಲಿದ್ದು. ರೈತರು-ಕೇಂದ್ರದ ನಡುವಿನ ಹಗ್ಗ-ಜಗ್ಗಾಟಕ್ಕೆ ಜ.15 ರ ಸಭೆಗೂ ಮುನ್ನವೇ ತಾರ್ಕಿಕ ಅಂತ್ಯ ಸಿಗುವ ನಿರೀಕ್ಷೆ ಇದೆ.

ಜ.11 ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುವ ದಿನವೇ ರೈತರೂ ಸಹ ತಮ್ಮ ಮುಂದಿನ ನಡೆಯನ್ನು ತೀರ್ಮಾನಿಸಲು ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: