ಮೈಸೂರು

ನೀರಾವರಿ ಇಲಾಖೆಯ ತಾಂತ್ರಿಕ ವಿಭಾಗದ ಎಇಇ,ಎಇ ಎಸಿಬಿ ಬಲೆಗೆ

 ಮಂಡ್ಯ ನೀರಾವರಿ ಇಲಾಖೆಯ ಇಬ್ಬರು ಮಹಿಳಾ ಅಧಿಕಾರಿಗಳು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ತಂಡದ   ಕೈಗೆ ರೆಂಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ.

ನೀರಾವರಿ ಇಲಾಖೆ ತಾಂತ್ರಿಕ ವಿಭಾಗದ ಅಧಿಕಾರಿಗಳಾದ ಎಇಇ ಜ್ಯೋತಿ, ಎಇ ಶೋಭಾ ಎಸಿಬಿ ಬಲೆಗೆ ಬಿದ್ದಿದ್ದಾರೆ. ರಾಮನಗರದ ಗುತ್ತಿಗೆದಾರ ಕೃಷ್ಣಪ್ಪ ಎಂಬುವವರ ಬಳಿ ರೂ.10 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದರು. ರಸ್ತೆ, ಚರಂಡಿ ಕಾಮಗಾರಿ ಪೂರ್ಣಗೊಂಡ ವರದಿಗಾಗಿ ರೂ.12 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬಂಧಿತ ಇಬ್ಬರು ಅಧಿಕಾರಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

ದಾಳಿಯು ಎಸಿಬಿ ಡಿವೈಎಸ್ಪಿ ಶೈಲೇಂದ್ರ, ಸಿಪಿಐ ವೆಂಕಟೇಗೌಡ, ಪಿಎಸ್ಐ ಪ್ರಶಾಂತ್ ನೇತೃತ್ವದಲ್ಲಿ ನಡೆದಿದೆ.

Leave a Reply

comments

Related Articles

error: