ಮೈಸೂರು

ಮರಾಠಿ ಪ್ರಾಧಿಕಾರವನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಜ.9:- ಕನ್ನಡ ಚಳವಳಿ ಕೇಂದ್ರ ಸಮಿತಿ ಮೈಸೂರು ವತಿಯಿಂದ ಜಿಲ್ಲಾ ಅಧ್ಯಕ್ಷರಾದ ಮೂಗೂರು ನಂಜುಂಡ ಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಕೂಡಲೇ ಮರಾಠಿ ಪ್ರಾಧಿಕಾರವನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಬಾಬು ಜಗಜೀವನ್ ರಾಮ್ ವೃತ್ತದ ಬಳಿ ಸಾಂಕೇತಿಕವಾಗಿ ಕಪ್ಪು ಬಟ್ಟೆ ಕೈಯಲ್ಲಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.

ಮೂಗೂರು ನಂಜುಂಡಸ್ವಾಮಿ ಮಾತನಾಡಿ ಕರ್ನಾಟಕ ವಿರೋಧಿ ಮರಾಠಿ ಪ್ರಾಧಿಕಾರವನ್ನು ರಾಜ್ಯ ಸರ್ಕಾರ ರಚನೆ ಮಾಡಿ ಕನ್ನಡಿಗರಿಗೆ ಅನ್ಯಾಯ ಮಾಡಿದೆ. ಗಡಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರು ನಿರಂತರ ದೌರ್ಜನ್ಯ ನಡೆಸುತ್ತಿರುವುದನ್ನು ನೋಡುತ್ತಿದ್ದೇವೆ. ಪ್ರಾಧಿಕಾರ ರದ್ದು ಮಾಡುವ ವರೆಗೂ ಚಳವಳಿ ನಿರಂತರವಾಗಿ ನಡೆಸಲಿದ್ದೇವೆ. ಜನವರಿ 30 ರಂದು ರಾಜ್ಯಾದ್ಯಂತ ರೈಲು ಹಳಿ ಬಂದ್ ಮಾಡಲಿದ್ದೇವೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ರಾಜ್ಯ ಅಧ್ಯಕ್ಷರಾದ ಶಿವರಾಂ, ಪರಿಸರವಾದಿ ಭಾನುಮೋಹನ್ , ಕನ್ನಡಪರ ಹೋರಾಟಗಾರರಾದ ತಾಯೂರು ವಿಠಲ ಮೂರ್ತಿ, ಬಾಲಕೃಷ್ಣ, ಪಿಸಿ ನಾಗರಾಜ್, ನಿಜಲಿಂಗಪ್ಪ, ಮಹಾದೇವಸ್ವಾಮಿ, ಲೋಕೇಶ್ ಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: