ಕರ್ನಾಟಕಪ್ರಮುಖ ಸುದ್ದಿ

ಪಿಯುಸಿ ಉಪನ್ಯಾಸಕರಿಗೆ ಈ ಬಾರಿ ಬೇಸಿಗೆ ರಜೆ ಖೋತಾ ಸಾಧ್ಯತೆ!

ಬೆಂಗಳೂರು: ಪಿಯುಸಿ ಉಪನ್ಯಾಸಕರಿಗೆ ರಜೆ ಇಲ್ಲ ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಶಾಕ್ ನೀಡಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರು ಮೇ 5 ರಿಂದ 20 ರವರೆಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ಪದವಿಪೂರ್ವ ಶಿಕ್ಷಣ ಮಂಡಳಿ ಸೂಚನೆ ನೀಡಿದೆ.  ಆದರೆ ಕಲಾ ವಿಭಾಗದ ಉಪನ್ಯಾಸಕರಿಗೆ ಇದು ಅನ್ವಯಿಸುವುದಿಲ್ಲ.

ಉಪನ್ಯಾಸಕರ ಕೌಶಲ್ಯ ವೃದ್ಧಿಸಿ ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ನೀಡುವ ದೃಷ್ಟಿಯಿಂದ ತರಬೇತಿ ಶಿಬಿರಗಳನ್ನು ಆಯೋಜಿಸುತ್ತಿದ್ದೇವೆ ಎಂದು ರಾಜ್ಯ ಸರ್ಕಾರಕ್ಕೆ ಈಗಾಗಲೇ  ಪ್ರಸ್ತಾವ ಕಳುಹಿಸಿಕೊಡಲಾಗಿದ್ದು, ಆದಷ್ಟು ತ್ವರಿತವಾಗಿ ಇದಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಪ್ರತಿವರ್ಷ ಮೇ 1 ರಿಂದ ಜೂನ್ 1 ರವರೆಗೆ ಬೇಸಿಗೆ ರಜೆ ಸಿಗುತ್ತಿತ್ತು. ಇದಕ್ಕೆ ಕಡಿವಾಣ ಹಾಕಿರುವ ಶಿಕ್ಷಣ ಇಲಾಖೆ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರಿಗೆ ತರಬೇತಿ ನೀಡಲು ಮುಂದಾಗಿದೆ. ತರಬೇತಿ ನೀಡುವ ಸಂಬಂಧ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

(ಎನ್‍.ಬಿ.ಎನ್‍)

Leave a Reply

comments

Related Articles

error: