ಕರ್ನಾಟಕಪ್ರಮುಖ ಸುದ್ದಿಮನರಂಜನೆ

ನಟಿ ರಾಗಿಣಿ ಅವರ ಜಾಮೀನು ಅರ್ಜಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಿಕೆ

ರಾಜ್ಯ(ಬೆಂಗಳೂರು)ಜ.12:- ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದಿನ ಮಂಗಳವಾರಕ್ಕೆ ಮುಂದೂಡಿದೆ.
ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಲುಕಿರುವ ನಟಿ ರಾಗಿಣಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನಟಿ ರಾಗಿಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಜಾಮೀನು ನೀಡಲು ನಿರಾಕರಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ನಟಿ ರಾಗಿಣಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದೀಗ ಸುಪ್ರೀಂಕೋರ್ಟ್ ಜನವರಿ 19ಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಹೀಗಾಗಿ ಸದ್ಯಕ್ಕೆ ನಟಿ ರಾಗಿಣಿಗೆ ಜೈಲೇ ಗತಿ ಎಂಬಂತಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: