ಮೈಸೂರು

ಮೈಸೂರು ಜಿಲ್ಲೆಯಲ್ಲಿ ಕೊರೋನಾ ಲಸಿಕೆ ವಿತರಣೆ ಕುರಿತ ಮಾಹಿತಿ

ಮೈಸೂರು,ಜ.12:- ಮೈಸೂರು ಜಿಲ್ಲೆಯಲ್ಲಿ ಕೊರೋನಾ ಲಸಿಕೆ ವಿತರಣೆ ಕುರಿತ ಮಾಹಿತಿಯನ್ನು ನೀಡಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಒಟ್ಟು 70,000 ಸಿರಿಂಜ್ ಗಳು ಶೇಖರಣೆ ಮಾಡಲಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಲಸಿಕೆ ಪಡೆಯುವವರ ಸಂಖ್ಯೆ ಒಟ್ಟು 33,009. ಈ ಪೈಕಿ, ಸರ್ಕಾರಿ ಆರೋಗ್ಯ ಕಾರ್ಯಕರ್ತರ ಸಂಖ್ಯೆ – 14,976. ಖಾಸಗಿ ಆರೋಗ್ಯ ಕಾರ್ಯಕರ್ತರ ಸಂಖ್ಯೆ – 18,033. ಮೊದಲ ಹಂತದಲ್ಲಿ ಕೇವಲ ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಕೊರೋನಾ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 234 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ವಿತರಣೆ ಮಾಡಲಾಗುತ್ತಿದೆ . ಈ ಪೈಕಿ ಸರ್ಕಾರಿ ಲಸಿಕಾ ಕೇಂದ್ರಗಳು – 162. ಖಾಸಗಿ ಲಸಿಕಾ ಕೇಂದ್ರಗಳು – 72 (26 ಸಂಸ್ಥೆಗಳು) ಇವೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: