
ಹೈದರಾಬಾದ್,ಜ.12-ತೆಲುಗು ಸೂಪರ್ ಸ್ಟಾರ್ ಚಿರಂಜೀವಿ ಅವರ ಪುತ್ರ, ನಟ ರಾಮ್ ಚರಣ್ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿದ್ದಾರೆ.
ರಾಮ್ ಚರಣ್ ಅವರ ಕೋವಿಡ್ ವರದಿ ನೆಗೆಟಿವ್ ಎಂದು ಬಂದಿದ್ದು, ಅವರು ಸೋಂಕಿನಿಂದ ಗುಣಮುಖರಾಗಿದ್ದಾರೆ. ತಾವು ಕೋವಿಡ್ ಸೋಂಕಿನಿಂದ ಗುಣಮುಖರಾಗಿರುವುದನ್ನು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
ಕೋವಿಡ್ ಸೋಂಕಿನಿಂದ ಗುಣಮುಖನಾಗಿರುವ ಸುದ್ದಿಯನ್ನು ಹಂಚಿಕೊಳ್ಳುವುದಕ್ಕೆ ಸಂತಸವಾಗುತ್ತಿದೆ. ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಕಾತುರನಾಗಿದ್ದೇನೆ. ನಿಮ್ಮೆಲ್ಲರ ಹಾರೈಕೆಗೆ ಧನ್ಯವಾದಗಳು. ಇಟ್ ಫೀಲ್ಸ್ ಗುಡ್ ಟು ಬಿ ಬಾಕ್ ಎಂದು ಬರೆದುಕೊಂಡಿದ್ದಾರೆ.
ಡಿಸೆಂಬರ್ 29, 2020ರಂದು ರಾಮ್ ಚರಣ್ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸೋಂಕು ತಗುಲಿರುವುದನ್ನು ಸ್ವತಃ ಅವರೇ ಟ್ವೀಟ್ ಮೂಲಕ ತಿಳಿಸಿದ್ದರು.
ಸೋಂಕಿನಿಂದ ಗುಣಮುಖರಾಗಿರುವ ರಾಮ್ ಚರಣ್ ಶೀಘ್ರದಲ್ಲೇ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. (ಏಜೆನ್ಸೀಸ್, ಎಂ.ಎನ್)