
ಕ್ರೀಡೆಪ್ರಮುಖ ಸುದ್ದಿವಿದೇಶ
Ind vs Aus: ಆಸ್ಟ್ರೇಲಿಯಾದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಜಡೇಜಾ
ದೇಶ(ನವದೆಹಲಿ)ಜ.13:- ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (ಎಸ್ಸಿಜಿ) ಆಡಿದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತೀಯ ತಂಡದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯಗೊಂಡಿದ್ದಾರೆ. ನಾಲ್ಕನೇ ಮತ್ತು ಅಂತಿಮ ಟೆಸ್ಟ್ ನಲ್ಲಿ ಜಡೇಜಾ ಭಾರತದ ತಂಡದ ಭಾಗವಾಗುವುದಿಲ್ಲ. ಸಿಡ್ನಿಯಲ್ಲಿ ನಡೆದ ಭಾರತದ ಮೊದಲ ಇನ್ನಿಂಗ್ಸ್ ಸಮಯದಲ್ಲಿ ಮಿಚೆಲ್ ಸ್ಟಾರ್ಕ್ ಅವರ ಚೆಂಡು ಜಡೇಜಾ ಅವರ ಹೆಬ್ಬೆರಳಿಗೆ ಬಡಿದಿತ್ತು. ಹೆಬ್ಬೆರಳಿನ ಪ್ರಾಕ್ಚರ್ ನಿಂದಾಗಿ ಜಡೇಜಾ ನಾಲ್ಕನೇ ಟೆಸ್ಟ್ನಿಂದ ಹೊರಗುಳಿದಿದ್ದಾರೆ.
ಮೂರನೇ ಟೆಸ್ಟ್ನಲ್ಲಿ ಜಡೇಜಾ ಪ್ರಮುಖ ಪಾತ್ರ ವಹಿಸಿದ್ದಾರೆ. ಜಡೇಜಾ ಮೂರನೇ ಟೆಸ್ಟ್ನಲ್ಲಿ ಸ್ಟೀವ್ ಸ್ಮಿತ್ ಅವರ ಅದ್ಭುತ ಫೀಲ್ಡಿಂಗ್ ಮೂಲಕ ರನ್ ಔಟ್ ಆಗಿದ್ದರು. ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್ ನಲ್ಲಿ ಜಡೇಜಾ 4 ವಿಕೆಟ್ ಪಡೆದರು. ಎಡಗೈ ಸ್ಪಿನ್ ಬೌಲರ್ ಜಡೇಜಾ ಅವರ ಹೆಬ್ಬೆರಳ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.
ಜಡೇಜಾ ಅವರು ತಮ್ಮ ಚಿತ್ರವನ್ನು ಹಂಚಿಕೊಂಡಿದ್ದಾರೆ ಮತ್ತು “ಸ್ವಲ್ಪ ಸಮಯದವರೆಗೆ ಆಕ್ಷನ್ ನಿಂದ ಹೊರಗೆ, ಶೀಘ್ರದಲ್ಲೇ ಹಿಂತಿರುಗುತ್ತೇವೆ” ಎಂದು ಟ್ವೀಟ್ ಮಾಡಿದ್ದಾರೆ. ಜಡೇಜಾ ಅವರ ಈ ಫೋಟೋಗೆ ಜನರು ಕಾಮೆಂಟ್ ಮಾಡುತ್ತಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಆರೋಗ್ಯವಾಗಬೇಕೆಂದು ಹಾರೈಸುತ್ತಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಜಡೇಜಾ ಅದ್ಭುತ ಪ್ರದರ್ಶನ ನೀಡಿದ್ದರು. (ಏಜೆನ್ಸೀಸ್,ಎಸ್.ಎಚ್)