ಮೈಸೂರು

ವ್ಯಕ್ತಿ ಕಾಣೆಯಾಗಿದ್ದಾರೆ

ಮೈಸೂರು.ಜ.13:- ಮೈಸೂರಿನ ಹೆಬ್ಬಾಳದ ನಿವಾಸಿ ಸಾವಿತ್ರಮ್ಮ ಎಂಬವರ ಮಗ ಸೋಮಶೇಖರ್ ಡಿಸೆಂಬರ್ 22 ರಂದು ಬೆಳಿಗ್ಗೆ 9.30 ಗಂಟೆಗೆ ಆಟೋ ತೆಗೆದುಕೊಂಡು ಹೋದವರು ಕಾಣೆಯಾಗಿದ್ದಾರೆ. ಕಾಣೆಯಾಗಿರುವ ಮಗನ ಪತ್ತೆಗಾಗಿ ತಾಯಿ ಸಾವಿತ್ರಮ್ಮ ಅವರು ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಇಂತಿದೆ
ವಯಸ್ಸು 45, ಬಿಳಿ ಮತ್ತು ಕಪ್ಪು ಬಣ್ಣದ ಗೆರೆಗಳುಳ್ಳ ಅರ್ಧ ತೋಳಿನ ಶರ್ಟ್ ಮತ್ತು ಕಂದು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಮೈಸೂರು ನಗರ ಕಂಟ್ರೋಲ್ ರೂಂ 0821-2418339, ಹೆಬ್ಬಾಳ್ ಪೊಲೀಸ್ ಠಾಣೆ 0821-2418318 ಸಂಪರ್ಕಿಸುವಂತೆ ಹೆಬ್ಬಾಳ್ ಪೊಲೀಸ್ ಠಾಣೆ ಉಪ ನಿರೀಕ್ಷರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: