ಕರ್ನಾಟಕಪ್ರಮುಖ ಸುದ್ದಿ

ಸ್ವರ್ಣ ನದಿ ರಕ್ಷಣೆಗೆ ಕರೆ ನೀಡಿದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು

ಉಡುಪಿ,ಜ.13-ಸ್ವರ್ಣ ನದಿ ರಕ್ಷಣೆಗೆ ಕಂಕಣಬದ್ಧರಾಗುವಂತೆ ಉಡುಪಿಯ ಸಮಸ್ತ ಜನತೆಗೆ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ.

ಸ್ವರ್ಣ ನದಿ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ನಿನ್ನೆ ರಾತ್ರಿ ಉಡುಪಿಯ ಪೆರಂಪಳ್ಳಿ ಸಮೀಪ ಶೀಂಬ್ರ ಕೃಷ್ಣಾಂಗಾರಕ ಸ್ನಾನಘಟ್ಟ ಜೀವನದಿ ಸುವರ್ಣೆಯ ತೀರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆರತಿ ಬೆಳಗಿದರು. ಈ ವೇಳೆ ಸ್ವರ್ಣೆಯ ರಕ್ಷಿಸುವಂತೆ ಜನತೆಗೆ ಕರೆ ನೀಡಿದರು.

ಸ್ಥಳೀಯ ಭಜನಾಮಂಡಳಿಯ ಸದಸ್ಯರ ಭಜನೆ ,ಯುವಕರ ಚಂಡೆವಾದನ , ತೇಲುವ ತೆಪ್ಪದಲ್ಲಿ ವಿದುಷಿ ಪವನಾ ಬಿ. ಆಚಾರ್ಯರ ವೀಣಾವಾದನ, ನೂರಾರು ಸಾಲು ದೀಪಗಳು ಕಾರ್ಯಕ್ರಮದ ಆಕರ್ಷಣೆಗಳಾಗಿತ್ತು.

ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ನಗರಸಭೆಯ ಅಧ್ಯಕ್ಷೆ ಸುಮಿತ್ರಾ ನಾಯಕ್ , ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ , ದೇವಳದ ವ್ಯವಸ್ಥಾಪಕ ಕೃಷ್ಣಮೂರ್ತಿ ಶಿವತ್ತಾಯ ಮತ್ತಿತರರು ಉಪಸ್ಥಿತರಿದ್ದರು. (ಎಂ.ಎನ್)

Leave a Reply

comments

Related Articles

error: