ದೇಶಪ್ರಮುಖ ಸುದ್ದಿ

ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ವಿರುದ್ಧ ಅತ್ಯಾಚಾರ ಆರೋಪ

ಮುಂಬೈ,ಜ.13-ತಮ್ಮ ಮೇಲೆ ಕೇಳಿ ಬಂದಿರುವ ಅತ್ಯಾಚಾರ ಆರೋಪವನ್ನು ಮಹಾರಾಷ್ಟ್ರ ಸಾಮಾಜಿಕ ಮತ್ತು ನ್ಯಾಯ ಸಚಿವ ಧನಂಜಯ್ ಮುಂಡೆ ತಳ್ಳಿ ಹಾಕಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಧನಂಜಯ್ ಅವರು, ದೂರು ನೀಡಿರುವ ಮಹಿಳೆ ಮತ್ತು ಆಕೆಯ ಸಹೋದರಿ ನನಗೆ ಬ್ಲ್ಯಾಕ್‌ಮೇಲ್ ತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ, ದೂರುದಾರೆಯ ಸಹೋದರಿ ಜೊತೆ ಸಂಬಂಧ ಹೊಂದಿದ್ದೆ ಎಂದು ಒಪ್ಪಿಕೊಂಡಿದ್ದು, ಆಕೆಗೆ ಇಬ್ಬರು ಮಕ್ಕಳು ಸಹ ಇರುವುದಾಗಿ ಮುಂಡೆ ಹೇಳಿದ್ದಾರೆ.

ನನ್ನ ವಿವಾಹೇತರ ಸಂಬಂಧದ ಬಗ್ಗೆ ನನ್ನ ಪತ್ನಿ, ಕುಟುಂಬ ಮತ್ತು ಸ್ನೇಹಿತರಿಗೆ ತಿಳಿದಿದೆ. ಎರಡು ಮಕ್ಕಳನ್ನೂ ನನ್ನ ಕುಟುಂಬ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಾನು ಸಂಬಂಧ ಹೊಂದಿದ್ದ ಮಹಿಳೆ 2019ರಿಂದಲೂ ನನಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಈ ಬಗ್ಗೆ ಪೊಲಿಸರಿಗೆ ದೂರು ಕೊಟ್ಟಿದ್ದರೆ. ನನ್ನ ವಿರುದ್ಧ ಮಾನಹಾನಿಕರ ವಿಷಯವನ್ನು ಹರಡದಂತೆ ತಡೆ ನೀಡಲು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾಗಿರುವುದಾಗಿ ಅವರು ತಿಳಿಸಿದ್ದಾರೆ.

37 ವರ್ಷದ ಮಹಿಳೆಯೊಬ್ಬರು ಸಚಿವರ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದು, ಜನವರಿ 10 ರಂದು ಮುಂಬೈ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದಿದ್ದಾರೆ. ಮುಂಡೆ 2006 ರಲ್ಲಿ ಪದೇ ಪದೇ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾಳೆ. ಈ ಮೊದಲು ತಾನು ಒಶಿವಾರಾ ಪೊಲೀಸರನ್ನು ಸಂಪರ್ಕಿಸಿದ್ದೇನೆ. ಆದರೆ, ನನ್ನ ದೂರನ್ನು ಸ್ವೀಕರಿಸಲಾಗಿಲ್ಲ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: