ಕರ್ನಾಟಕಪ್ರಮುಖ ಸುದ್ದಿ

ಗ್ರಾಮೀಣ ಡಾಕ್ ಸೇವಕ ಹುದ್ದೆ : ಅರ್ಜಿ ಆಹ್ವಾನ

ಮಂಡ್ಯ: ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಕಂಪ್ಯೂಟರ್ ಕೇಂದ್ರದಿಂದ ಕನಿಷ್ಠ 60 ದಿನಗಳ ತರಬೇತಿ ಹೊಂದಿರಬೇಕು. ಹೆಚ್ಚಿನ ವಿದ್ಯಾರ್ಹತೆ ಇರುವವರೂ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ 100 ರೂಗಳಾಗಿದ್ದು ಮಹಿಳಾ ಅಭ್ಯರ್ಥಿಗಳು ಹಾಗೂ ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳಿಗೆ ಶುಲ್ಕ ಅನ್ವಯವಾಗುವುದಿಲ್ಲ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 8.

ಹೆಚ್ಚಿನ ಮಾಹಿತಿಗೆ https://indiapost.gov.in ಅಥವಾ  https://appost.in/gdsonline ಅನ್ನು ವೀಕ್ಷಿಸಬಹುದು. ಹುದ್ದೆಗಳ ವಿವರಗಳಿಗೆ ಮಂಡ್ಯ ಜಿಲ್ಲೆಯ ಎಲ್ಲ ಅಂಚೆ ಕಛೇರಿಯ ಸೂಚನಾ ಫಲಕದಲ್ಲಿ ವೀಕ್ಷಿಸಬಹುದು.

(ಎನ್‍.ಬಿ.ಎನ್‍)

Leave a Reply

comments

Related Articles

error: