ಕರ್ನಾಟಕಪ್ರಮುಖ ಸುದ್ದಿಮನರಂಜನೆ

ರಾಕಿಂಗ್ ಸ್ಟಾರ್ ಯಶ್ ಗೆ ನೋಟಿಸ್ ನೀಡಿದ ಆರೋಗ್ಯ ಇಲಾಖೆ

ಬೆಂಗಳೂರು,ಜ.13-ರಾಕಿಂಗ್ ಸ್ಟಾರ್ ಯಶ್ ಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ. `ಕೆಜಿಎಫ್ 2’ ಸಿನಿಮಾದಲ್ಲಿ ಯಶ್ ಸಿಗರೇಟ್ ಸೇದುವ ದೃಶ್ಯಕ್ಕೆ ಸಂಬಂಧಿಸಿದಂತೆ ಯಶ್ ಗೆ ನೋಟಿಸ್ ಜಾರಿ ಮಾಡಲಾಗಿದೆ.

ಯಶ್ ಹುಟ್ಟುಹಬ್ಬದ ಪ್ರಯುಕ್ತ `ಕೆಜಿಎಫ್ 2’ ಸಿನಿಮಾ ಟೀಸರ್ ಬಿಡುಗಡೆಯಾಗಿತ್ತು. ಟೀಸರ್ ನಲ್ಲಿ ಯಶ್ ಗನ್ ನಿಂದ ಸಿಗರೇಟ್ ಹಚ್ಚುವ ದೃಶ್ಯವಿದೆ. ಇದಕ್ಕೆ ನಿಯಮದ ಪ್ರಕಾರ ‘ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ’ ಎನ್ನುವ ಕ್ಯಾಪ್ಷನ್ ಹಾಕಬೇಕು. ಆದರೆ ಟೀಸರ್ ನಲ್ಲಿ ಹಾಕಿಲ್ಲ. ಇದು ಧೂಮಪಾನ ಪ್ರಚೋದಿಸುತ್ತಿದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹಾಗಾಗಿ ಈ ದೃಶ್ಯವನ್ನು ತೆಗೆದು ಹಾಕುವಂತೆ ಹೇಳಿದೆ.

ಲಕ್ಷಾಂತರ ಯುವ ಅಭಿಮಾನಿಗಳನ್ನು ಹೊಂದಿರುವ ಮತ್ತು ಸಾಮಾಜಿಕ ಕಳಕಳಿ ಇರುವ ಯಶ್ ಇಂತಹ ದೃಶ್ಯಗಳನ್ನು ಯುವ ಜನತೆ ಅನುಸರಿಸುವುದು ಸಾಮಾನ್ಯ. ಇದರಿಂದ ಕ್ಯಾನ್ಸರ್ ಮುಂತಾದ ಕಾಯಿಲೆಗಳಿಗೆ ಯುವ ಜನರು ಒಳಗಾಗುವ ಸಾಧ್ಯತೆ ಇದೆ. ಹಾಗಾಗಿ ಇಂತಹ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ.

ಟೀಸರ್ ಯುಟೂಬ್ ನಲ್ಲಿ ನಂ.1 ಟ್ರೆಂಡಿಂಗ್ ನಲ್ಲಿದ್ದು, ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡಿದೆ. ಟೀಸರ್ ದಾಖಲೆ ನಿರ್ಮಿಸಿದ್ದು, ಟೀಸರ್ ನಲ್ಲಿ ಯಶ್ ಸಿಗರೇಟ್ ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗನ್ ನಿಂದ ಸಿಗರೇಟು ಹಚ್ಚುತ್ತಿರುವ ಫೋಟೋವನ್ನು ಸ್ಕ್ರೀನ್ ಶಾಟ್ ತೆಗೆದು ಅಭಿಮಾನಿಗಳು ಶೇರ್ ಮಾಡುತ್ತಿದ್ದಾರೆ. ಇದೀಗ ಈ ದೃಶ್ಯಕ್ಕೆ ಆಕ್ಷೇಪ ವ್ಯಕ್ತವಾಗಿದೆ. (ಎಂ.ಎನ್)

 

Leave a Reply

comments

Related Articles

error: