
ಮೈಸೂರು
ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ತೋರಿಸಿಕೊಳ್ಳಲು ಜನಪ್ರತಿನಿಧಿಗಳ ಮೇಲೆ ಸವಾರಿ : ಡಿಸಿ ರೋಹಿಣಿ ಸಿಂಧೂರಿ ಮೇಲೆ ಶಾಸಕ ಸಾ.ರಾ.ಮಹೇಶ್ ಅಸಮಾಧಾನ
ಮೈಸೂರು,ಜ.14:- ತಾವೊಬ್ಬ ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ತೋರಿಸಿಕೊಳ್ಳಲು ಜನಪ್ರತಿನಿಧಿಗಳ ಮೇಲೆ ಸವಾರಿ ಮಾಡುತ್ತಿದ್ದಾರೆ ಎಂದು ರೋಹಿಣಿ ಸಿಂಧೂರಿ ವರ್ತನೆಗೆ ಶಾಸಕ ಸಾ.ರಾ.ಮಹೇಶ್ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ಸಾರಾ ಮಹೇಶ್ ಹಾಗೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಟಾಪಟಿ ಮುಂದುವರೆದಿದೆ. ವಚನದ ಮೂಲಕ ಜಿಲ್ಲಾಧಿಕಾರಿಗೆ ಸಾರಾ ಮಹೇಶ್ ಟಾಂಗ್ ನೀಡಿದ್ದಾರೆ. ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ತಮ್ಮ ದಿಢೀರ್ ವರ್ಗಾವಣೆಗೆ ನ್ಯಾಯ ಕೇಳಲು ಕೆಎಟಿಗೆ ಹೋಗಿದ್ದವರು ಇಂದು ಮೈಸೂರಿನಲ್ಲಿ ಉಲ್ಟಾ ಹೊಡೆದ ಕಥೆ ಇಡೀ ನಾಡಿಗೆ ಗೊತ್ತಿದೆ. ಇಂಥವರಿಂದ ನಾನು ಪಾಠ ಕಲಿಯಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತನಗೊಂದು ನ್ಯಾಯ, ಪರರಿಗೊಂದು ನ್ಯಾಯ ಎನ್ನುವ ಇಂತಹ ಅಧಿಕಾರಿಗಳು ಶಿಷ್ಟಾಚಾರಗಳ ಕುರಿತ ಸರ್ಕಾರದ ಸುತ್ತೋಲೆಗಳನ್ನು ಓದಿ ಮೊದಲು ಅರ್ಥಮಾಡಿಕೊಳ್ಳಲಿ. ಮಂಗಳವಾರ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಭೆಯಿಂದ ಹೊರ ನಡೆದಿದ್ದಕ್ಕೆ ಟ್ವಿಟರ್ ನಲ್ಲಿ ಶಾಸಕ ಸಾ.ರಾ.ಮಹೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. (ಕೆ.ಎಸ್,ಎಸ್.ಎಚ್)