ಮೈಸೂರು

ವಿಶ್ವನಾಥ್‌ ಅವರಿಗೆ ನಮ್ಮ ಪಕ್ಷದ ಸಿದ್ಧಾಂತ ಗೊತ್ತಿಲ್ಲ : ಹೆಚ್.ವಿಶ್ವನಾಥ್ ನಡೆಗೆ ಶಾಸಕ ನಾಗೇಂದ್ರ ಅಸಮಾಧಾನ

ಮೈಸೂರು,ಜ.14:- ವಿಶ್ವನಾಥ್‌ ಅವರಿಗೆ ನಮ್ಮ ಪಕ್ಷದ ಸಿದ್ಧಾಂತ ಗೊತ್ತಿಲ್ಲ. ಅವರು ಬೇರೆ ಬೇರೆ ಪಕ್ಷಗಳಿಗೆ ಹೋಗಿ ಬಂದವರು. ನಮ್ಮ ಪಕ್ಷದಲ್ಲಿ ಎಲ್ಲದಕ್ಕೂ ಶಿಸ್ತು ಎನ್ನುವುದಿದೆ ಎಂದು ಶಾಸಕ ಎಲ್‌.ನಾಗೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದಕ್ಕೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ವಿಶ್ವನಾಥ್‌ ನಡೆಗೆ ಶಾಸಕ ನಾಗೇಂದ್ರ ಬೇಸರ ವ್ಯಕ್ತಪಡಿಸಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ನಾಗೇಂದ್ರ, ವಿಶ್ವನಾಥ್ ಅವರು ಹಿರಿಯರಿದ್ದಾರೆ. ಅವರಿಗೆ ಏನೂ ಹೇಳುವ ಅವಶ್ಯಕತೆ ಇಲ್ಲ. ಅವರಿಗೆ ಕೇವಲ ಸಲಹೆ ಮಾತ್ರವೇ ನೀಡಬಹುದು. ಎಲ್ಲವನ್ನೂ ರಾಜ್ಯದ ಜನತೆಗೆ ಹೇಳುವ ಅವಶ್ಯಕತೆ ಇಲ್ಲ. ಪಕ್ಷದ ಚೌಕಟ್ಟಿನಲ್ಲಿ, ನಾಲ್ಕು ಗೋಡೆಗಳ ಮಧ್ಯದಲ್ಲಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು. ವಿಶ್ವನಾಥ್ ಅವರು ಸಹನೆಯಿಂದ ಇರಬೇಕು ಎಂದು ಸಲಹೆ ನೀಡಿದರು.

ಅತೃಪ್ತ ಶಾಸಕರ ಕುರಿತು ಮಾತನಾಡಿ, ಸಚಿವರಾಗುವ ಆಸೆ ಎಲ್ಲ ಶಾಸಕರಿಗೂ ಇರುತ್ತೆ, ಕೊಟ್ಟರೆ ಬೇಡ ಅನ್ನೋಕೆ ಆಗುತ್ತಾ? ಮೈಸೂರು ಭಾಗಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ ನಿಜ. ನಾನು ಇದ್ದೇನೆ, ರಾಮದಾಸ್ ಅವರೂ ಇದ್ದಾರೆ. ನಾವೂ ಬಹಳ ವರ್ಷಗಳಿಂದ ಪಕ್ಷದಲ್ಲಿ ಇದ್ದೇವೆ, ನಮಗೂ ಅವಕಾಶ ಸಿಕ್ಕಿಲ್ಲ. ಯಾರಿಗೆಲ್ಲಾ ಸಮಸ್ಯೆ ಆಗಿದೆಯೋ ಅವರೆಲ್ಲಾ ವರಿಷ್ಠರನ್ನು ಭೇಟಿ ಮಾಡಿ ಅಂತ ಯಡಿಯೂರಪ್ಪನವರೇ ಹೇಳಿದ್ದಾರೆ. ಪಕ್ಷದ ಚೌಕಟ್ಟಿನಲ್ಲಿ ಯಾರು ಬೇಕಾದರೂ ಭೇಟಿ ಮಾಡಬಹುದು, ಎಲ್ಲರಿಗೂ ಅವಕಾಶವಿದೆ ಎಂದು ನಾಗೇಂದ್ರ ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: