ಸುದ್ದಿ ಸಂಕ್ಷಿಪ್ತ

ಯಶಸ್ವಿನಿ ಯೋಜನೆಯಡಿಯಲ್ಲಿ ಸಹಾಯಧನ : ಅರ್ಜಿ ಆಹ್ವಾನ

ಮೈಸೂರು,ಜ.15:- ತಿ.ನರಸೀಪುರ ಪುರಸಭಾ ವ್ಯಾಪ್ತಿಯಲ್ಲಿ 2019-20ನೇ ಸಾಲಿನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಪರಿಶಿಷ್ಟಜಾತಿ ರೋಗಿಗಳಿಗೆ ಯಶಸ್ವಿನಿ ಯೋಜನೆಯಡಿ ಗುರುತಿಸಲ್ಪಟ್ಟ ದವಾಖಾನೆಗಳಲ್ಲಿ ಯಶಸ್ವಿನಿ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ತಹಶೀಲ್ದಾರ್ ಅವರಿಂದ ಪಡೆದಿರುವ ಪ್ರಸ್ತುತ ಸಾಲಿನ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರದ ನಕಲು, ರೇಷನ್ ಕಾರ್ಡ್ ಅಥವಾ ಚುನಾವಣಾ ಗುರುತಿನ ದಾಖಲೆ, ಆಧಾರ್ ಕಾರ್ಡ್ ನಕಲು ಪ್ರತಿ, ಯಶಸ್ವಿನಿ ಯೋಜನೆಯಡಿ ಸರ್ಕಾರದಿಂದ ಗುರುತಿಸಲ್ಪಟ್ಟ ಆಸ್ಪತ್ರೆಗಳಿಂದ ಶಸ್ತ್ರ ಚಿಕಿತ್ಸೆಗೆ ತಗಲುವ ವೆಚ್ಚದ ಅಂದಾಜು ಪಟ್ಟಿ ಮತ್ತು ಕಾಯಿಲೆ ವಿವರದ ದೃಢೀಕರಣ ಪತ್ರ, ಇತ್ತೀಚಿನ ಎರಡು ಭಾವಚಿತ್ರ ಮತ್ತು ಬ್ಯಾಂಕ್ ಖಾತೆ ಸಂಖ್ಯೆ ಮತ್ತು ನಕಲು ಪ್ರತಿ ಲಗ್ಗತ್ತಿಸಿ ಜನವರಿ 16ರೊಳಗೆ ಸಲ್ಲಿಸಬೇಕೆಂದು ತಿ.ನಸರೀಪುರ ಪುರಸಭೆಯ ಮುಖ್ಯಾಧಿಕಾರಿ ಅಶೋಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: