ದೇಶಪ್ರಮುಖ ಸುದ್ದಿ

ಪಂಜಾಬ್ ಗಡಿಯಲ್ಲಿ ಪಾಕ್ ನುಸುಳುಕೋರನ ಹತ್ಯೆಗೈದ ಬಿಎಸ್ ಎಫ್ ಯೋಧರು

ಗುರುದಾಸ್ಪುರ,ಜ.15-ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಓರ್ವ ನುಸುಳುಕೋರನನ್ನು ಬಿಎಸ್ ಎಫ್ ಯೋಧರು ಹತ್ಯೆ ಮಾಡಿದ್ದಾರೆ.

ಪಂಜಾಬ್ ರಾಜ್ಯದ ಗುರುದಾಸ್ಪುರ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ವಾಧಿಯಾ ಛೀಮಾ ಮತ್ತು ಕೊಟ್ರಾಜ್ಡಾದಲ್ಲಿ ಕಳೆದ ರಾತ್ರಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದಿತ್ತು.

ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಗಡಿ ನುಸುಳಲು ಯತ್ನಿಸುತ್ತಿದ್ದ ಓರ್ವ ಪಾಕ್ ನುಸುಳುಕೋರನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: