ದೇಶಪ್ರಮುಖ ಸುದ್ದಿ

ಸಚಿವ ಶ್ರೀಪಾದ್ ನಾಯಕ್ ರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಪಣಜಿ,ಜ.15-ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಗೋವಾ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಇಂದು ಆಸ್ಪತ್ರೆಗೆ ಭೇಟಿ ನೀಡಿದ ಉಪರಾಷ್ಟ್ರಪತಿಗಳು ಶ್ರೀಪಾದ್ ನಾಯಕ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಬಳಿಕ ವೈದ್ಯರೊಂದಿಗೂ ಮಾತನಾಡಿದ್ದಾರೆ. ಶ್ರೀಪಾದ್ ನಾಯಕ್ ಅವರು ಅಪಾಯದಿಂದ ಪಾರಾಗಿದ್ದು,  ಅವರ ದೇಹದ ಪ್ರಮುಖ ಅಂಗಾಂಗಗಳು ಸಹಜವಾಗಿ ಕೆಲಸ ಮಾಡುತ್ತಿವೆ ಎಂದು ವೈದ್ಯರು ಭರವಸೆ ನೀಡಿದ್ದಾರೆ ಎಂದು ವೆಂಕಯ್ಯ ನಾಯ್ಡು ಟ್ವೀಟ್ ಮಾಡಿದ್ದಾರೆ.

ಇನ್ನೊಂದೆಡೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಸಚಿವ ಶ್ರೀಪಾದ್ ನಾಯಕ್ ಅವರ ವಿಶೇಷಾಧಿಕಾರಿ ಸೂರಜ್ ನಾಯಕ್ ಅವರಿಗೆ ಕರೆ ಮಾಡಿ ಅವರ ಆರೋಗ್ಯ ಚೇತರಿಕೆ ಬಗ್ಗೆ ವಿಚಾರಿಸಿದ್ದಾರೆ.

ಜ.11 ರಂದು ಕರ್ನಾಟಕದ ಯಲ್ಲಾಪುರದಿಂದ-ಗೋಕರ್ಣಕ್ಕೆ ಹೋಗುವ ವೇಳೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊಸಕಂಬಿ ಗ್ರಾಮದಲ್ಲಿ ಕಾರು ಅಪಘಾತಕ್ಕೀಡಾಗಿ ಸಚಿವರು ಗಾಯಗೊಂಡಿದ್ದಾರೆ. ಇವರಿಗೆ ಎರಡು ಮೂಳೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಅಪಘಾತದಲ್ಲಿ ಸಚಿವರ ಪತ್ನಿ ವಿಜಯಾ ಮತ್ತು ಆಪ್ತ ಕಾರ್ಯದರ್ಶಿ ದೀಪಕ್ ದುಬೆ ಸಾವನ್ನಪ್ಪಿದ್ದರು. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: