ದೇಶಪ್ರಮುಖ ಸುದ್ದಿ

ದೆಹಲಿಯಲ್ಲಿ ದಟ್ಟ ಮಂಜಿನಿಂದಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯ

ನವದೆಹಲಿ,ಜ.16-ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಬೆಳಿಗ್ಗೆ ಭಾರಿ ಮಂಜು ಕವಿದ ವಾತಾವರಣದಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ದಟ್ಟ ಮಂಜಿನಿಂದಾಗಿ ವಿಮಾನ ನಿಲ್ದಾಣದಲ್ಲಿ ರನ್ ವೇ ಗೋಚರಿಸುತ್ತಿರಲಿಲ್ಲ. ಇದರಿಂದ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಮತ್ತು ಅಲ್ಲಿಂದ ಹೊರಡಬೇಕಿದ್ದ ನಾಲ್ಕು ವಿಮಾನಗಳ ಸಂಚಾರಕ್ಕೆ ಅಡ್ಡಿಯಾಗಿದೆ.

ಕೆಲವು ವಿಮಾನಗಳ ಹಾರಾಟ ವಿಳಂಬವಾದರೆ, ಇನ್ನು ಒಂದು ವಿಮಾನ ಸಂಚಾರವನ್ನು ರದ್ದುಗೊಳಿಸಿದೆ.

ವಾಹನ ಸಂಚಾರಕ್ಕೆ ಅಡ್ಡಿ: ದಟ್ಟ ಮಂಜು ಆವರಿಸಿದ್ದರಿಂದ ದೆಹಲಿಯ ಕೆಲವು ಪ್ರದೇಶಗಳಲ್ಲಿ ವಾಹನ ಸವಾರರಿಗೆ ತೊಂದರೆ ಉಂಟಾಗಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: