ಕರ್ನಾಟಕಪ್ರಮುಖ ಸುದ್ದಿ

ಚಾಮರಾಜನಗರದಲ್ಲಿ ಓರ್ವರಿಗೆ ಮಾತ್ರ ಕೊರೋನಾ ಸೋಂಕು : 34ಕ್ಕಿಳಿದ ಪ್ರಕರಣ

ರಾಜ್ಯ(ಚಾಮರಾಜನಗರ)ಜ.18:- ಚಾಮರಾಜನಗರ ಜಿಲ್ಲೆಯಲ್ಲಿ ಭಾನುವಾರ 987 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಒಬ್ಬರಿಗೆ ಮಾತ್ರ ಸೋಂಕು ತಗುಲಿರುವುದು ದೃಢಪಟ್ಟಿದೆ. ಆರು ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 34ಕ್ಕೆ ಇಳಿದಿದೆ.

ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 23 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಒಬ್ಬರು ಐಸಿಯುನಲ್ಲಿ ದಾಖಲಾಗಿದ್ದಾರೆ. ಕೋವಿಡ್ ಸಂಬಂಧಿತ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.

ಈವರೆಗೆ ಜಿಲ್ಲೆಯಲ್ಲಿ 6,860 ಪ್ರಕರಣಗಳು ದೃಢಪಟ್ಟಿವೆ. 6,695 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಕೋವಿಡ್‌ನಿಂದ ಹಾಗೂ ಇತರೆ ಕಾರಣಗಳಿಂದ 20 ಮಂದಿ ಮೃತಪಟ್ಟಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: