ಮೈಸೂರು

ಯಾವುದೇ ಕಾರಣಕ್ಕೂ ಬೆಮೆಲ್ ಸಂಸ್ಥೆ ಖಾಸಗೀಕರಣ ಮಾಡಲು ಬಿಡಲ್ಲ

ಮೈಸೂರು,ಜ.18:- ಕೇಂದ್ರ ಸರ್ಕಾರವು ಬೆಮೆಲ್ ಸಂಸ್ಥೆಯನ್ನು ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿರುವುದನ್ನು ಖಂಡಿಸಿ ಅನೇಕ ಹೋರಾಟಗಳನ್ನು 2017ರಿಂದ ಇಂದಿನವರೆಗೆ ಭಾರತ್ ಅರ್ತ್ ಮೂವರ್ಸ್ ಎಂಪ್ಲಾಯೀಸ್ ಅಸೋಸಿಯೇಷನ್ ಹಮ್ಮಿಕೊಂಡು ಬಂದಿದೆ
ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದೆ. ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಲು ಇಂದು ಸಂಘದ ಅಧ್ಯಕ್ಷರಾದ ಹೆಚ್.ವೈ.ಮುನಿರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಲಾಯಿತು.
ಈ ವೇಳೆ ಮುನಿರೆಡ್ಡಿ ಅವರು ಮುಂದಿನ ದಿನಗಳಲ್ಲಿ ಇನ್ನೂ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಬೆಮೆಲ್ ಸಂಸ್ಥೆಯನ್ನು ಖಾಸಗೀಕರಣ ಮಾಡಲು ಬಿಡುವುದಿಲ್ಲ ಎಂದಿದ್ದಾರೆ.
ಪ್ರಧಾನ ಕಾರ್ಯದರ್ಶಿ ಎಂ.ಡಿ.ರಾಜಶೇಖರ ಮೂರ್ತಿ ಸೇರಿದಂತೆ ನೌಕರರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: