ಕರ್ನಾಟಕಪ್ರಮುಖ ಸುದ್ದಿಮೈಸೂರು

ಗಡಿ ವಿವಾದ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಹಿನ್ನೆಲೆ : ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ



ಬೆಂಗಳೂರು/ಮೈಸೂರು,ಜ.18:- ಗವಿ ಗಡಿವಿವಾದ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಿಎಂ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಬೆಳಗಾವಿ ನಮ್ಮದು ಎಂಬ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಸಿಎಂನ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ.ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿಎಂ ಎನ್ನುವುದನ್ನು ಮರೆಯಬೇಡಿ. ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಸಿಎಂ ಅವರ ಉದ್ಧಟತನದ ಹೇಳಿಕೆಗೆ ಕರ್ನಾಟಕ ಸಿಎಂ ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಟ್ವಿಟರ್ ಮೂಲಕ ಎಚ್ಚರಿಕೆ ನೀಡಿದ್ದಾರೆ. (ಕೆ.ಎಸ್,ಎಸ್.ಎಚ್)

ಇದನ್ನೂ ಓದಿ

ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ವಿಚಾರಕ್ಕೆ ಸರಣಿ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಮಹಾ ಸಿಎಂ ಹೇಳಿಕೆಗೆ ಸಿಎಂ ಬಿಎಸ್ ವೈ ಕಿಡಿ :ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತು ದೇಶದ ಏಕತೆಗೆ ಮಾರಕ

Leave a Reply

comments

Related Articles

error: