ದೇಶಪ್ರಮುಖ ಸುದ್ದಿ

ರಾಮಂದಿರ ನಿರ್ಮಾಣಕ್ಕಾಗಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹಣ ಕೊಟ್ಟಿದ್ದೆಷ್ಟು ಗೊತ್ತಾ?


ದೇಶ( ನವದೆಹಲಿ)ಜ.19:- ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ರಾಜ್ಯಸಭಾ ಸಂಸದ ದಿಗ್ವಿಜಯ್ ಸಿಂಗ್ ಅವರು ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮೂಲಕ 1,11,111 ರೂ (ಒಂದು ಲಕ್ಷ ಹನ್ನೊಂದು ಸಾವಿರದ ನೂರು ಹನ್ನೊಂದು ರೂಪಾಯಿ) ಚೆಕ್ ಅನ್ನು ಶ್ರೀ ರಾಮ್ ಜನ್ಮ ಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್‌ಗೆ ಕಳುಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ರಾಮ ಮಂದಿರಕ್ಕಾಗಿ ದೇಶದ ಜನರಿಂದ ದೇಣಿಗೆ ಸಂಗ್ರಹಿಸುವ ಕೆಲಸವನ್ನು ಸೌಹಾರ್ದಯುತ ವಾತಾವರಣದಲ್ಲಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಅದೇ ವೇಳೆ ವಿಶ್ವ ಹಿಂದೂ ಪರಿಷತ್ ಹಳೆಯ ದೇಣಿಗೆಯ ಖಾತೆಯನ್ನು ಸಾರ್ವಜನಿಕರ ಮುಂದೆ ಇಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ಅಧ್ಯಕ್ಷ ರಾಮನಾಥ್ ಕೋವಿಂದ್, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯರಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಅನೇಕರು ರಾಮಂದಿರಕ್ಕೆ ದೇಣಿಗೆ ನೀಡಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: