ದೇಶಪ್ರಮುಖ ಸುದ್ದಿ

ಸೂರತ್ ನಲ್ಲಿನ ಟ್ರಕ್ ಅಪಘಾತ: ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ಘೋಷಣೆ

ಸೂರತ್,ಜ.19-ಗುಜರಾತ್ ನ ಸೂರತ್ ನಲ್ಲಿ ಸಂಭವಿಸಿದ ಭೀಕರ ಟ್ರಕ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಘೋಷಣೆ ಮಾಡಿದೆ.

ಸಾವಿಗೀಡಾದ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ಸಚಿವಾಲಯ ಘೋಷಣೆ ಮಾಡಿದೆ.

ಪರಿಹಾರ ಘೋಷಣೆ ಮಾಡಿದ ಸಿಎಂ ಗೆಹ್ಲೂಟ್: ಇತ್ತ ರಾಜಸ್ಥಾನ ಸಿಎಂ ಆಶೋಕ್ ಗೆಹ್ಲೂಟ್ ಅವರೂ ಸಹ ಪರಿಹಾರ ಘೋಷಣೆ ಮಾಡಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಸೂರತ್‌ನಲ್ಲಿ ನಡೆದ ಟ್ರಕ್ ಅಪಘಾತದಿಂದಾಗಿ ಆಘಾತಗೊಂಡಿದ್ದೇನೆ. ಸಂತ್ರಸ್ಥ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಅಂತೆಯೇ ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಗುಜರಾತ್‌ನ ಕೋಸಂಬಾದಲ್ಲಿ ವಲಸೆ ಕಾರ್ಮಿಕರು ಫುಟ್ ಬಾತ್ ಮೇಲೆ ಮಲಗಿದ್ದರು. ಈ ವೇಳೆ ಟ್ರಕ್ ಹರಿದು 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟಿರುವ ಎಲ್ಲರೂ ರಾಜಸ್ಥಾನದ ಬಾಂಸ್ವಾಡಾದಿಂದ ಬಂದಿದ್ದ ವಲಸೆ ಕಾರ್ಮಿಕರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿರುವ ಕಬ್ಬು ತುಂಬಿದ್ದ ಟ್ರಕ್‌, ಚಾಲಕನ ನಿಯಂತ್ರಣಕ್ಕೆ ಸಿಗದೆ ಫುಟ್‌ಪಾತ್‌ ಮೇಲೆ ಸಾಗಿದೆ. ಅಲ್ಲಿ ಮಲಗಿದ್ದವರ ಪೈಕಿ 13 ಮಂದಿ ಮೃತಪಟ್ಟಿದ್ದು, ಗಾಯಗೊಂಡಿರುವ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: