ಮೈಸೂರು

ಕೆಲಸ ಮಾಡಿಕೊಡದೇ ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಜ.19:- ಕೆಲಸ ಮಾಡಿಕೊಡದೇ ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನೊಂದ ಗ್ರಾಮಸ್ಥ ಕಪಿನಿ ಗೌಡ ಅವರು ಏಕಾಂಗಿ ಪ್ರತಿಭಟನೆ ನಡೆಸಿದರು.
ಇಂದು ಬೆಳಿಗ್ಗೆ ಗ್ರಾಮ ಪಂಚಾಯಿತಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದ ಅವರು ಶ್ರೀರಾಂಪುರ ಗ್ರಾಮಪಂಚಾಯಿತಿ ಪಿ. ಡಿ.ಓ , ಜಿಲ್ಲಾ ಪಂಚಾಯತ್ ಅಧಿಕಾರಿಗಳು ,ತಾಲೂಕು ಅಧಿಕಾರಿಗಳು, ಜಿಲ್ಲಾಡಳಿತ ಅಧಿಕಾರಿಗಳು 11ಬಿ ಮಾಡಿಕೊಡಿ ಎಂದು ಹೇಳಿದರು.
ಬರಹ ಮೂಲಕ ಕೊಟ್ಟರೂ ಅವರ ಮಾತಿಗೆ ಬೆಲೆ ಕೊಡದೆ ಒಂದು ವರ್ಷದಿಂದ ಸತಾಯಿಸುತ್ತಿದಾರೆ. ಇದರಿಂದ ನೊಂದು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದೇನೆ ಎಂದು ತಿಳಿಸಿದರಲ್ಲದೇ ಕೆಲಸ ಮಾಡಿಕೊಡದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: