
ಕರ್ನಾಟಕಪ್ರಮುಖ ಸುದ್ದಿ
ನಮ್ಮ ರಾಜ್ಯ ಕೋವಿಡ್ ವ್ಯಾಕ್ಸಿನ್ ಪಡೆಯುವಲ್ಲಿ ದೇಶದಲ್ಲೇ ಮುಂದಿದೆ : ಸಚಿವ ಡಾ. ಕೆ.ಸುಧಾಕರ್
ರಾಜ್ಯ( ಹುಬ್ಬಳ್ಳಿ)ಜ.19:- ನಮ್ಮ ರಾಜ್ಯ ಕೋವಿಡ್ ವ್ಯಾಕ್ಸಿನ್ ಪಡೆಯುವಲ್ಲಿ ದೇಶದಲ್ಲೇ ಮುಂದಿದೆ. ಆರಂಭದಲ್ಲಿ ಲಸಿಕೆ ಪಡೆಯುವವರಲ್ಲಿ ಹಿಂಜರಿಕೆ ಸಹಜ, ಆದರೂ ವೈದ್ಯಕೀಯ ಸಿಬ್ಬಂದಿ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಲಸಿಕೆ ಕುರಿತು ಮಾತನಾಡಿದ ಅವರು, ಸಂಡೂರಿನಲ್ಲಿ ಕೋವಿಡ್ ಲಸಿಕೆ ಪಡೆದಿದ್ದ ವ್ಯಕ್ತಿ ಸಾವಿಗೀಡಾಗಿದ್ದು, ಮರಣೋತ್ತರ ಪರೀಕ್ಷೆ ನಂತರ ಸಾವಿನ ಬಗ್ಗೆ ನಮಗೆ ನಿಖರ ಮಾಹಿತಿ ಲಭ್ಯವಾಗಲಿದೆ. ಲಸಿಕೆ ಸುರಕ್ಷಿತತೆ ಬಗ್ಗೆ ಅನುಮಾನ ಬೇಡ. ಸಾಕಷ್ಟು ಮಂದಿ ಲಸಿಕೆ ಪಡೆದಿದ್ದು ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಿದರು. (ಕೆ.ಎಸ್,ಎಸ್.ಎಚ್)