ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ 645 ಕೊರೋನಾ ಪ್ರಕರಣಗಳು ವರದಿ

ರಾಜ್ಯ(ಬೆಂಗಳೂರು)ಜ.20:- ರಾಜ್ಯದಲ್ಲಿ 645 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 9,33,077ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 12,181 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ 357 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,95,509ಕ್ಕೆ ಏರಿಕೆಯಾಗಿದೆ. ಸೋಂಕಿಗೆ 4 ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ 807 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,13,012ಕ್ಕೆ ಏರಿಕೆಯಾಗಿದೆ. 7,865 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 172 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: