ಮೈಸೂರು

ಅಂಬಿಗರಚೌಡಯ್ಯ ಜಯಂತಿ ಆಚರಣೆ

ಮೈಸೂರು,ಜ.21:- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಅಂಬಿಗರ ಚೌಡಯ್ಯ ಜಯಂತಿಯನ್ನು ಕಲಾಮಂದಿರದ ಆವರಣದ ಮನೆಯಂಗಳದಲ್ಲಿ ಇಂದು ಆಯೋಜಿಸಲಾಗಿತ್ತು.
ಕೋವಿಡ್-19 ಹಿನ್ನೆಲೆಯಲ್ಲಿ ಮನೆಯಂಗಳದಲ್ಲಿ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು. ಶಾಸಕ ಎಲ್.ನಾಗೇಂದ್ರ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು. ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚೆನ್ನಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

comments

Related Articles

error: