ಮೈಸೂರು

ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು, ಜ.22 :- ರಸ್ತೆ ಸುರಕ್ಷತೆಯ ಬಗ್ಗೆ ಜಿಲ್ಲೆಯ ವಿವಿಧ ಇಲಾಖೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪ್ರಾಪ್ತ ವಯಸ್ಕರರು ವಾಹನ ಚಾಲನೆ ಮಾಡುವುದನ್ನು ತಡೆಯಲು ಶಾಲಾ ಕಾಲೇಜುಗಳಲ್ಲಿ ಡಿ.ಎಲ್ ಹೊಂದಿರದವರಿಗೆ ಪಾರ್ಕಿಂಗ್ ವ್ಯವಸ್ಥೆ ನಿರಾಕರಿಸಲು ಸುತ್ತೋಲೆ ಹೊರಡಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶಿವಕುಮಾರ್, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ದೀಪಕ್.ಎಲ್, ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕ್ಷಕ ಮಂಜುನಾಥ, ನಿತೀನ್.ವಿ ಸೇರಿದಂತೆ ಇತರರು ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: