ಕರ್ನಾಟಕಪ್ರಮುಖ ಸುದ್ದಿ

ಏ.24ರಿಂದ ಬೆಂಗಳೂರಿನಲ್ಲಿ ಒಂದು ತಿಂಗಳ ಕಾಲ ರಾಷ್ಟ್ರಮಟ್ಟದ ಖಾದಿ ಉತ್ಸವ

ಬೆಂಗಳೂರು:  ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಸಹಯೋಗದೊಂದಿಗೆ ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಖಾದಿ ಉತ್ಸವವನ್ನು ಏಪ್ರಿಲ್ 24 ರಿಂದ ಮೇ 23 ರ ವರೆಗೆ ಬೆಂಗಳೂರಿನ ಗಾಂಧಿನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ಏರ್ಪಡಿಸಲಾಗಿದೆ.

ಈ ವಸ್ತು ಪ್ರದರ್ಶನದ ಉದ್ಫಾಟನೆಯನ್ನು ಏಪ್ರಿಲ್ 24 ರಂದು ಸ್ವಾತಂತ್ರ್ಯ ಉದ್ಯಾನವನ, ಪೀಪಲ್ ಪ್ಲಾಜಾ, ಗಾಂಧಿನಗರ, ಬೆಂಗಳೂರು ಇಲ್ಲಿ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಫಾಟಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಗಾಂಧಿನಗರ ಕ್ಷೇತ್ರದ ಶಾಸಕರಾದ ದಿನೇಶ್ ಗುಂಡೂರಾವ್ ಅವರು ವಹಿಸಲಿದ್ದಾರೆ. ಮಳಿಗೆಗಳ ಉದ್ಫಾಟನೆಯನ್ನು ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಅವರು ನೆರವೇರಿಸಲಿದ್ದಾರೆ. ಪ್ರಾತ್ಯಕ್ಷಿಕೆ ಉದ್ಫಾಟನೆಯನ್ನು ಬೆಂಗಳೂರು ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರು ಹಾಗೂ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೆ.ಜೆ.ಜಾರ್ಜ್ ಅವರು ಉದ್ಫಾಟನೆಯನ್ನು ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾದ ಯಲುವನಹಳ್ಳಿ ಎನ್.ರಮೇಶ್ “ಥೀಮ್ ಪೆವಿಲಿಯನ್” ಅನ್ನು ಉದ್ಫಾಟನೆ ಮಾಡಲಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮಹಾಪೌರರಾದ ಶ್ರೀಮತಿ ಜಿ. ಪದ್ಮಾವತಿ, ಬೆಂಗಳೂರು ಕೇಂದ್ರ ಕ್ಷೇತ್ರದ ಲೋಕಸಭಾ ಸದಸ್ಯ ಪಿ.ಸಿ. ಮೋಹನ್ ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

(ಎನ್‍.ಬಿ.ಎನ್)

Leave a Reply

comments

Related Articles

error: