ಕರ್ನಾಟಕಪ್ರಮುಖ ಸುದ್ದಿ

ಕೋವಿಡ್ ಹಿನ್ನೆಲೆ; ಗಣರಾಜ್ಯೋತ್ಸವ ಸರಳ ಆಚರಣೆ; ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ರಾಜ್ಯ( ಬೆಂಗಳೂರು)ಜ.25:- 71ನೇ ಗಣರಾಜ್ಯೋತ್ಸವವನ್ನು ಈ ಬಾರಿ ಕೋವಿಡ್‌ ಕಾರಣದಿಂದ ಸರಳವಾಗಿ ಆಚರಿಸಲಾಗುತ್ತಿದೆ. ನಗರದ ಫೀಲ್ಡ್‌ ಮಾರ್ಷಲ್‌ ಮಾಣೆಕ್‌ ಷಾ ಪರೇಡ್ ಮೈದಾನಕ್ಕೆ ಈ ಬಾರಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳೂ ಕೂಡ ನಡೆಯುವುದಿಲ್ಲ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ಇಡೀ ಕಾರ್ಯಕ್ರಮ 40 ನಿಮಿಷದಲ್ಲಿ ಮುಗಿಯಲಿದೆ. ನಾಳೆ ಬೆಳಿಗ್ಗೆ 9ಗಂಟೆಗೆ ರಾಜ್ಯಪಾಲರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸುತ್ತಾರೆ. ಬಳಿಕ ರಾಜ್ಯದ ಜನರಿಗೆ 71ನೇ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ’ ಎಂದು ತಿಳಿಸಿದ್ದಾರೆ.

ಕೆಎಸ್‌ಆರ್‌ಪಿ, ಸಿಆರ್‌ಪಿಎಫ್‌, ಬಿಎಸ್‌ಎಫ್, ಸಂಚಾರ ಪೊಲೀಸರು, ಅಗ್ನಿಶಾಮಕ ದಳ, ಶ್ವಾನದಳ ಮತ್ತು ಬ್ಯಾಂಡ್‌ ಸೇರಿದಂತೆ ಒಟ್ಟು 21 ತುಕಡಿಗಳಲ್ಲಿ 750 ಮಂದಿ ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅತಿಗಣ್ಯ, ಗಣ್ಯ ಮತ್ತು ಇತರೆ ಆಹ್ವಾನಿತರಿಗೆ 500 ಆಸನ ವ್ಯವಸ್ಥೆ ಕಲ್ಪಿಸಲಾಗಿದೆ‌. ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಆಹ್ವಾನಿತರು ಕಡ್ಡಾಯವಾಗಿ ಮುಖಗವಸು ಧರಿಸಬೇಕು ಮತ್ತು ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಕಾರ್ಯಕ್ರಮದ ನೇರಪ್ರಸಾರಕ್ಕೂ ವ್ಯವಸ್ಥೆ ಮಾಡಲಾಗಿದೆ.

Leave a Reply

comments

Related Articles

error: